newsics.com
ಬೆಂಗಳೂರು : ಭಾರತದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಏರುತ್ತಲೇ ಇದೆ. ಇದೀಗ ಕರ್ನಾಟಕದಲ್ಲಿ ಓಮಿಕ್ರಾನ್ ಆತಂಕ ಎದುರಾಗಿದೆ. ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆಯಲ್ಲಿ ಓಮಿಕ್ರಾನ್ ಬಿಎ.2 ಹಾಗೂ ಬಿಎ.5 ಉಪತಳಿಗಳ ಸಂಖ್ಯೆ ಹೆಚ್ಚಾಗಿದೆ.
2022ರ ಮೇ ತಿಂಗಳಿನಿಂದ ಜೂನ್ ತಿಂಗಳ ವರೆಗೆ ಕರ್ನಾಟಕದಲ್ಲಿ ಪತ್ತೆಯಾಗುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಶೇಕಡಾ 90.20 ರಷ್ಟು ಓಮಿಕ್ರಾನ್ ಪ್ರಕರಣಗಳಾಗಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.
ವಿಶ್ವದೆಲ್ಲೆಡೆ ಮತ್ತೆ ಕೊರೋನ ಹೆಚ್ಚುತ್ತಿದ್ದು, ಯುಕೆ ಯಲ್ಲಿ ಮತ್ತೆ ಸ್ಫೋಟಗೊಂಡಿದೆ. ಯುಕೆಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಶೇಕಡಾ 75 ರಷ್ಟು ಹೆಚ್ಚಾಗಿದೆ. ಇದೀಗ 2 ಲಕ್ಷ ಹೊಸ ಕೇಸ್ ಗಳು ಪತ್ತೆಯಾಗಿದೆ. ಇದರ ಜೊತೆಗೆ ಓಮಿಕ್ರಾನ್ ಉಪತಳಿ ಪ್ರಕರಣವೂ ಗಣನೀಯವಾಗಿ ಏರಿಕೆಯಾಗಿದೆ.
ತಂಡಕ್ಕೆ ಆಯ್ಕೆಯಾಗದ ಕಾರಣ ಖಿನ್ನತೆಗೊಳಗಾಗಿ ಕ್ರಿಕೆಟಿಗ ಆತ್ಮಹತ್ಯೆಗೆ ಯತ್ನ