Thursday, August 18, 2022

ಬೆಂಗಳೂರಿನಲ್ಲಿ ಒಬ್ಬರಿಗೆ ಒಮಿಕ್ರಾನ್ ಸೋಂಕು‌ ಶಂಕೆ: ಸಚಿವ ಸುಧಾಕರ್

Follow Us

newsics.com

ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬಂದಿರುವ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರಿಗೆ ಒಮಿಕ್ರಾನ್ ಸೋಂಕಿನ ಶಂಕೆಯಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ (ಐಸಿಎಂಆರ್‌) ರವಾನಿಸಲಾಗಿದೆ ಎಂದು ಸುಧಾಕರ್‌ ತಿಳಿಸಿದ್ದಾರೆ.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಬ್ಬರ ಮಾದರಿಗಳನ್ನೂ ಪರೀಕ್ಷಿಸಲಾಗಿದೆ. 63 ವರ್ಷದ ವ್ಯಕ್ತಿಯಲ್ಲಿ ಪತ್ತೆಯಾಗಿರುವ ವೈರಾಣುವಿನ ಪರೀಕ್ಷಾ ವರದಿ ಡೆಲ್ಟಾ ತಳಿಗಿಂತ ಭಿನ್ನವಾಗಿರುವುದು ಕಂಡುಬಂದಿದೆ. ಅವರಲ್ಲಿ ಒಮಿಕ್ರಾನ್‌ ತಳಿಯ ವೈರಾಣು ಇರುವ ಬಗ್ಗೆ ಖಚಿತವಾಗಿಲ್ಲ. ಈ ಕುರಿತು ಹೆಚ್ಚಿನ ಅಧ್ಯಯನಕ್ಕಾಗಿ ಮಾದರಿಯನ್ನು ಐಸಿಎಂಆರ್‌ಗೆ ಕಳುಹಿಸಲಾಗಿದೆ ಎಂದರು.

ಸೋಮವಾರ ಸಂಜೆಯ ವೇಳೆಗೆ ಐಸಿಎಂಆರ್‌ ವರದಿ ಲಭ್ಯವಾಗುವ ನಿರೀಕ್ಷೆ ಇದೆ. ಆ ಬಳಿಕ ಎಲ್ಲವೂ ಸ್ಪಷ್ಟವಾಗಲಿದೆ ಎಂದರು.

ಬೆಂಗಳೂರಿನ ರಾಜಾಜಿನಗರ ಇಎಸ್‌ಐ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಮೃತರಾದ ಇಬ್ಬರ ಶವಗಳನ್ನು 15 ತಿಂಗಳಿನಿಂದ ಇರಿಸಿಕೊಂಡಿದ್ದ ವಿಷಯ ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಕಾರ್ಮಿಕ ಸಚಿವರನ್ನು ಸಂಪರ್ಕಿಸಿ ಈ ಬಗ್ಗೆ ಚರ್ಚಿಸಲಾಗಿದೆ. ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅಸುರನ್ ಚಿತ್ರದ ಪಾತ್ರಕ್ಕೆ ಧನುಷ್ ಗೆ ಅತ್ಯುತ್ತಮ ನಟ ಪ್ರಶಸ್ತಿ

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!