Thursday, August 18, 2022

ಒಮಿಕ್ರಾನ್ ವೈರಸ್: ಅಲರ್ಟ್ ಆದ ರಾಜ್ಯ ಸರ್ಕಾರ, ಕಠಿಣ ಕ್ರಮಕ್ಕೆ ನಿರ್ಧಾರ

Follow Us

newsics.com

ಬೆಂಗಳೂರು: ಕೊರೋನಾ ಬೆನ್ನಲ್ಲೇ ವಿದೇಶಗಳಲ್ಲಿ ಹೊಸತಳಿಯ ಒಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೆಚ್ಚು ಅಲರ್ಟ್ ಆಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ (ನ.27) ತುರ್ತು ಸಭೆ ನಡೆಸಿದ್ದು, ಕಳೆದ ಒಂದು ವಾರದ ಪಾಸಿಟಿವಿಟಿ ರೇಟ್‌ನ ಮಾಹಿತಿ ಪಡೆದುಕೊಂಡಿದ್ದಾರೆ.

ವಿದೇಶಗಳಲ್ಲಿ ಹೊಸ ತಳಿಯ ಒಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆ ಅಧಿಕಾರಿಗಳ ಜತೆ ಮಹತ್ವದ ಚರ್ಚೆ ನಡೆಸಿದ್ದು, ವಿದೇಶಗಳಲ್ಲಿ ಹೊಸತಳಿಯ ಒಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆ ಗಡಿ ಭಾಗದಲ್ಲಿ ಬಿಗಿ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿವೆ.

ಮಹಾರಾಷ್ಟ್ರ, ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಾದ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯದ ಗಡಿಯಲ್ಲಿ ದಿನದ 24 ಗಂಟೆ ಬಿಗಿ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಗಡಿಯಲ್ಲಿ ಸಿಬ್ಬಂದಿ ಶಿಫ್ಟ್ ವೈಸ್ ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ.

ಕೇರಳದಿಂದ ಬರುವ ಪ್ರಯಾಣಿಕರಿಗೆ ಕೊವಿಡ್ ಟೆಸ್ಟ್ ಕಡ್ಡಾಯವಾಗಿದೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಳ ಹಿನ್ನೆಲೆ ಟೆಸ್ಟ್ ಕಡ್ಡಾಯ ಎಂದು ತಿಳಿಸಲಾಗಿದೆ. ಕೇರಳದಿಂದ ಬಂದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ ಆಗಿದೆ.

ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಈ ನಾಲ್ಕು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಕೇರಳದಿಂದ ಬಂದವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಇರಲಿದೆ. ಹಾಸ್ಟೆಲ್ನಲ್ಲಿದ್ದವರಿಗೆ ಎರಡನೇ ಬಾರಿಗೆ ಟೆಸ್ಟ್ ಮಾಡಿಸಬೇಕು ಎಂದು ಸಭೆ ಬಳಿಕ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾವಹಿಸಿ. ವಿದೇಶಿ ಪ್ರಜೆಗಳಿಗೆ ಕಡ್ಡಾಯವಾಗಿ RTPCR ಟೆಸ್ಟ್ ಮಾಡಿಸಿ ವಿಮಾನ ನಿಲ್ದಾಣ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು.

ಕಚೇರಿ, ಹೋಟೆಲ್, ಮಾಲ್‌ಗಳಲ್ಲಿ ಸಿಬ್ಬಂದಿಗೆ ಲಸಿಕೆ ಕಡ್ಡಾಯ ಆಗಿರಲಿದೆ. ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ಶಾಲಾ-ಕಾಲೇಜುಗಳಲ್ಲಿ ಕೊರೋನಾ ಕೇಸ್ ಹೆಚ್ಚಾಗಿವೆ. ಕೇಸ್ ಹೆಚ್ಚಾದ ಕಡೆ ನಿಗಾ ವಹಿಸಲು ಡಿಸಿಗಳಿಗೆ ಸೂಚನೆ ಕೊಡಲಾಗಿದೆ. ಮದುವೆಗಳಲ್ಲಿ ಜನರು ಮಾಸ್ಕ್ ಧರಿಸುವುದು ಕಡ್ಡಾಯವಿರಲಿ. ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮುಂದೂಡುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕೊರೋನಾ ಸ್ಥಿತಿಗತಿ ನೋಡಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು ಎಂದರು.

1. ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.
2. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವೀಕ್ಷಣೆ ಕೈಗೊಳ್ಳುವುದು.
3. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪವೇಶಿಸುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ.
4. ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು
5. 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು
6. ಹಾಸ್ಟೆಲ್‌ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಬೇಕು.
7. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
8. ಹೋಟೆಲ್, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು
9. ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು.
10. ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸಬೇಕು.
11. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗೆಟಿವ್ ಇದ್ದವರಿಗೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
12. ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವಂತೆ ಸರ್ಕಾರ ಸೂಚಿಸಿದೆ.

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೋನಾ ಸೋಂಕು

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!