newsics.com
ಬೆಂಗಳೂರು: ಕೊರೋನಾ ಮೂರನೇ ಅಲೆ ಆತಂಕದ ನಡುವೆಯೇ ರಾಜ್ಯದಲ್ಲಿ ಒಂದರಿಂದ ಐದನೇ ತರಗತಿಗಳ ಆರಂಭಕ್ಕೂ ಸರ್ಕಾರ ಸಿದ್ಧತೆ ನಡೆಸಿದೆ.
ಕೋವಿಡ್ 19 ಮಾರ್ಗಸೂಚಿಗಳನ್ನು ಇನ್ನಷ್ಟು ಸರಳೀಕರಣಗೊಳಿಸುವ ಸಂಬಂಧ ಅ.19ರ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಯಲಿದೆ. ಈ ಸಭೆಯಲ್ಲಿ ಒಂದರಿಂದ ಐದನೇ ತರಗತಿ ಆರಂಭ ಕುರಿತಂತೆ ಮಹತ್ವದ ನಿರ್ಧಾರ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆಯಲಿದ್ದು, ಸಚಿವರಾದ ಡಾ.ಕೆ.ಸುಧಾಕರ್, ಬಿ.ಸಿ.ನಾಗೇಶ್, ಶ್ರೀರಾಮುಲು, ಇಲಾಖೆಯ ಅಧಿಕಾರಿಗಳು ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಕೇರಳದಲ್ಲಿ ಭಾರೀ ಮಳೆ, ಹಲವೆಡೆ ಪ್ರವಾಹ, ಜನಜೀವನ ಅಸ್ತವ್ಯಸ್ತ, ಜನರ ಪರದಾಟ