Tuesday, April 13, 2021

ಆನ್‌ಲೈನ್ ಶಿಕ್ಷಣ; ಸರ್ಕಾರದಿಂದ ಹೊಸ ಮಾರ್ಗಸೂಚಿ

ಬೆಂಗಳೂರು: ವಿವಾದಿತ ಆನ್‌ಲೈನ್ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಎಲ್‌ಕೆಜಿಯಿಂದ 5ನೇ ತರಗತಿವರೆಗೆ ಆನ್‌ಲೈನ್/ಆಫ್ ಲೈನ್ ಬೋಧನೆಯನ್ನು ಸರ್ಕಾರದ ಮಾರ್ಗಸೂಚಿಗಳು ಬರುವವರೆಗೂ ಮಾಡತಕ್ಕದ್ದಲ್ಲ ಎಂದು ಸರ್ಕಾರ ಆದೇಶಿಸಿದೆ.
ಎಲ್‌ಜೆಕಿಯಿಂದ 5ನೇ ತರಗತಿವರೆಗೆ ಮತ್ತು 6ರಿಂದ 10ನೇ ತರಗತಿವರೆಗೆ ಆನ್‌ಲೈನ್ ಶಿಕ್ಷಣವನ್ನು ವಯೋಮಾನಕ್ಕೆ ಅನುಗುಣವಾಗಿ ವೈಜ್ಞಾನಿಕವಾಗಿ ಅಳವಡಿಸಲು ಮಾರ್ಗಸೂಚಿಗಳನ್ನು ಸಿದ್ಧಪಡಿಸಲು ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ಪ್ರಸ್ತುತ ಕಾರ್ಯನಿರ್ವ ಹಿಸುತ್ತಿದ್ದು ಎರಡು ಸಭೆಗಳನ್ನು ನಡೆಸಿದೆ.
ಹೈಕೋರ್ಟ್ ತಜ್ಞರ ವರದಿ ಬರುವವರೆಗೆ ಸೀಮಿತ ಆನ್ ಲೈನ್ ಶಿಕ್ಷಣ ನೀಡುವ ವಿಚಾರವನ್ನು ಸರ್ಕಾರ ಪರಿಗಣಿಸಬೇಕು ಎಂದು ಅಭಿಪ್ರಾಯಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಮಧ್ಯಂತರ ಮಾರ್ಗಸೂಚಿ ಹೊರಡಿಸಿದೆ.
ಪೂರ್ವ ಪ್ರಾಥಮಿಕ ಮಕ್ಕಳಿಗೆ ಆನಲೈನ್ ಶಿಕ್ಷಣ ನೀಡುವಂತಿಲ್ಲ. ಆದರೆ ವಾರಕ್ಕೊಮ್ಮೆ 30 ನಿಮಿಷಕ್ಕೆ ಮೀರದಂತೆ ಪಾಲಕರೊಂದಿಗೆ ಮಾತ್ರ ಆನ್ ಲೈನ್ ಸಂವಹನ ನಡೆಸಲು ಅವಕಾಶ. 1ರಿಂದ 5ನೇ ತರಗತಿಯ ಮಕ್ಕಳಿಗೆ ದಿನ ಬಿಟ್ಟು ದಿನ ಗರಿಷ್ಠ 3 ದಿನ 30-45 ನಿಮಿಷಗಳ ಎರಡು ಅವಧಿ ಮೀರದಂತೆ ಆನ್ ಲೈನ್ ಶಿಕ್ಷಣವನ್ನು ಸಿಂಕ್ರೋನಸ್ ವಿಧಾನದಲ್ಲಿ ಒದಗಿಸಬಹುದು. 6ರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ 5 ದಿನ 30-45 ನಿಮಿಷ ಎರಡು ಅವಧಿಯಲ್ಲಿ ಆನ್ ಲೈನ್ ಶಿಕ್ಷಣ ನೀಡಬಹುದು ಎಂದು ಮಾರ್ಗದರ್ಶಿ ಸೂತ್ರದಲ್ಲಿ ವಿವರಿಸಲಾಗಿದೆ.
ಈ ಮಾರ್ಗಸೂಚಿ ಅಂತಿಮ ಮಾರ್ಗಸೂಚಿ ಬರುವವರೆಗೆ ಮಾತ್ರ ಜಾರಿಯಲ್ಲಿರಲಿದೆ. ಆನ್ ಲೈನ್ ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆಗಳು ಹೆಚ್ಚುವರಿ ಶುಲ್ಕ ವಿಧಿಸುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!