newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 530 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಬೆಂಗಳೂರಿನಲ್ಲಿ 494 ಸೇರಿದಂತೆ ರಾಜ್ಯಾಧ್ಯಂತ 530 ಜನರಿಗೆ ಕೊರೋನಾ ತಗುಲಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಇಟನ್ ತಿಳಿಸಿದೆ.
ಸೋಂಕಿತರ ಸಂಖ್ಯೆ ಒಟ್ಟೂ 3961361ಕ್ಕೆ ಏರಿಕೆಯಾಗಿದೆ. ಸೋಮವಾರ 637 ಮಂದಿ ಸೇರಿದಂತೆ ಈವರೆಗೆ 3916320 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 4,928 ಸಕ್ರಿಯ ಸೋಂಕಿತರಿದ್ದಾರೆ.