Monday, April 12, 2021

ಬೆಂಗಳೂರಲ್ಲಿ 738 ಸೇರಿ ರಾಜ್ಯದಲ್ಲಿ 1105 ಮಂದಿಗೆ ಸೋಂಕು, 19 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರವೂ ಕೊರೋನಾ ಅಕ್ಷರಶಃ ಸ್ಪೋಟಗೊಂಡಿದ್ದು, ರಾಜ್ಯದಲ್ಲಿ ಸೋಮವಾರ ಬರೋಬ್ಬರಿ 1105 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.
ಸೋಮವಾರ ಪತ್ತೆಯಾದ 1105 ಪ್ರಕರಣಗಳು ಸೇರಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 14,295ಕ್ಕೆ ಏರಿಕೆಯಾಗಿದೆ.
ಮತ್ತೊಂದು ಆಘಾತಕಾರಿ ವಿಚಾರವೆಂದರೆ, ಸೋಮವಾರ ಕೊರೋನಾದಿಂದಲೇ 19 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 226ಕ್ಕೆ ತಲುಪಿದೆ. ಇವತ್ತು ಒಂದೇ ದಿನ 176 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 7683 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6382 ಸಕ್ರಿಯ ಪ್ರಕರಣಗಳು ಇದ್ದು 268 ಐಸಿಯುನಲ್ಲಿ ಇದ್ದಾರೆ. ಬೆಂಗಳೂರಿನಲ್ಲಿ ಜೂನ್ 19 ರಂದು 138, ಜೂನ್ 20 ರಂದು 94, ಜೂನ್ 21 ರಂದು 196, ಜೂನ್ 22 ರಂದು 126, ಜೂನ್ 23 ರಂದು 107, ಜೂನ್ 24 ರಂದು 173, ಜೂನ್ 25 ರಂದು 113, ಜೂನ್ 26 ರಂದು 144, ಜೂನ್ 27 ರಂದು 596, ಜೂನ್ 28 ರಂದು 783, ಜೂನ್ 29 ರಂದು 738 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!