Tuesday, April 13, 2021

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ನಾಗರಿಕ ಬಲಿ

ಶ್ರೀನಗರ: ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಮಧ್ಯರಾತ್ರಿ ಎರಡು ಗಂಟೆ ಹೊತ್ತಿಗೆ ಪೂಂಛ್ ಜಿಲ್ಲೆಯ ಬಾಲಕೋಟ್ ಮತ್ತು ಮೆಂದರ್ ವಲಯದಲ್ಲಿ ಭಾರತದ ಸೇನಾ ನೆಲೆಗಳನ್ನು ಗುರಿಯಾಗಿರಿಸಿ ಗುಂಡಿನ ದಾಳಿ ನಡೆಸಿದೆ. ನಾಗರಿಕ ನೆಲೆಗಳ ಮೇಲೂ ಪಾಕ್ ಶೆಲ್ ದಾಳಿ ನಡೆಸಿದೆ. ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ನಾಗರಿಕ ಪ್ರಾಣ ಕಳೆದುಕೊಂಡಿದ್ದಾರೆ.

ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತ ಸೂಕ್ತ ಪ್ರತ್ಯುತ್ತರ ನೀಡಿದೆ. ಭಾರತದ ಗಮನವೆಲ್ಲ ಚೀನಾ ಗಡಿಯತ್ತ ನೆಟ್ಟಿರುವ ಹಿನ್ನೆಲೆಯಲ್ಲಿ ಪಾಕ್ ತನ್ನ ಪುಂಡಾಟವನ್ನು ತೀವ್ರಗೊಳಿಸಿದೆ. ಗುಂಡಿನ ದಾಳಿ ನಡೆಸುವುದರ ಮೂಲಕ ಉಗ್ರರನ್ನು ಭಾರತಕ್ಕೆ ಕಳುಹಿಸುವುದು ಅದರ ಇನ್ನೊಂದು ತಂತ್ರವಾಗಿದೆ.

ಪಾಕಿಸ್ತಾನದ ಸತತ ಕದನ ವಿರಾಮ ಉಲ್ಲಂಘನೆ ಹಿನ್ನೆಲೆಯಲ್ಲಿ  ಗಡಿ ನಿಯಂತ್ರಣ ರೇಖೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹೆಚ್ಚುವರಿ ಸೇನಾಪಡೆಗಳನ್ನು ರವಾನಿಸಲಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದ ಮುಂಚೂಣಿ ನೆಲೆಗಳಿಗೆ ಪಾಕ್ ಕೂಡ ಹೆಚ್ಚುವರಿ ಪಡೆಗಳನ್ನು ಕಳುಹಿಸಿದೆ ಎಂದು ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!