Wednesday, October 28, 2020

ಕೊರೋನಾ ಸೋಂಕಿತರು, ಗುಣಮುಖರಾದವರಲ್ಲಿ ಪಾರ್ಶ್ವವಾಯು ಸಮಸ್ಯೆ

newsics.com
ಬೆಂಗಳೂರು: ಕೊರೋನಾ ಸೋಂಕಿತರು ಹಾಗೂ ಕಾಯಿಲೆಯಿಂದ ಚೇತರಿಸಿಕೊಂಡ ಕೆಲವರಿಗೆ ಪಾರ್ಶ್ವವಾಯು ಸಮಸ್ಯೆ ಕಾಣಿಸಿಕೊಳ್ಳುತ್ತಿದೆ.
ಕಳೆದ ಮೂರು ತಿಂಗಳಲ್ಲಿ ಕೆಲವರಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿರುವುದು ತಪಾಸಣೆಯಿಂದ ಪತ್ತೆಯಾಗಿದೆ ಎಂದು ನಗರದ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.
ಮೂರು ತಿಂಗಳಲ್ಲಿ 8 ಕೋವಿಡ್ ರೋಗಿಗಳನ್ನು ತಪಾಸಣೆ ಮಾಡಿದ್ದೇನೆ. ಅವರು ಚೇತರಿಸಿಕೊಳ್ಳುವ ವೇಳೆ ಹಾಗೂ ಚೇತರಿಸಿಕೊಂಡ ನಂತರ ಎರಡರಿಂದ ಮೂರು ವಾರಗಳ ಅವಧಿಯಲ್ಲಿ ಪಾರ್ಶ್ವವಾಯುವಿಗೆ ಒಳಗಾಗಿದ್ದರು. ಕೋವಿಡ್ ರೋಗಿಗಳ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟುವ ಸಾಧ್ಯತೆಗಳು ಹೆಚ್ಚಿವೆ. ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರು ಹಾಗೂ ಬೇರೆ ಯಾವುದೇ ಕಾಯಿಲೆ ಇಲ್ಲದ ಯುವಕರು ಕೂಡ ಈ ಸಮಸ್ಯೆಗೆ ಒಳಗಾಗಿರುವುದು ಗಮನಕ್ಕೆ ಬಂದಿದೆ ಎಂದು ಸಕ್ರಾ ವರ್ಲ್ಡ್ ಆಸ್ಪತ್ರೆಯ ನರರೋಗ ತಜ್ಞ ಡಾ ಸತೀಶ್ ರುದ್ರಪ್ಪ ಹೇಳಿದ್ದಾರೆ.
ನಮ್ಮ ಮೂವರು ನರವಿಜ್ಞಾನಿಗಳು ಕಳೆದ ಜೂನ್‌ನಿಂದ ಈವರೆಗೆ ಪಾರ್ಶ್ವವಾಯುವಿನಿಂದ ಬಳಲಿದ 14 ಕೋವಿಡ್ ರೋಗಿಗಳನ್ನು ತಪಾಸಣೆ ಮಾಡಿದ್ದಾರೆ ಎಂದು ಬನ್ನೇರುಘಟ್ಟದ ಅಪೋಲೊ ಆಸ್ಪತ್ರೆಯ ನರವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಸೂರ್ಯನಾರಾಯಣ ಶರ್ಮ ತಿಳಿಸಿದ್ದಾರೆ.
ಕೋವಿಡ್‌ ಕಾಣಿಸಿಕೊಂಡ ಬಳಿಕ ನರಗಳು ದುರ್ಬಲವಾಗುವ ಸಾಧ್ಯತೆಗಳಿವೆ. ಮರಗಟ್ಟುವಿಕೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ರೋಗಿಗಳು ಹೇಳಿಕೊಂಡಿದ್ದಾರೆ ಎಂದು ಶರ್ಮ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...

9 ಗಂಟೆ ವಿಚಾರಣೆ ವೇಳೆ ಮೋದಿಗೆ ಕೇಳಲಾಗಿತ್ತು 100 ಪ್ರಶ್ನೆ

Newsics.com ನವದೆಹಲಿ:  ಗುಜರಾತ್ ಹಿಂಸಾಚಾರ ಕುರಿತಂತೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ರಾಘವನ್ , ಮೋದಿ ವಿಚಾರಣೆ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಐಪಿಎಸ್ ಅಧಿಕಾರಿಯಾಗಿದ್ದ ರಾಘವನ್ ನೇತೃತ್ವದಲ್ಲಿ ವಿಶೇಷ...
- Advertisement -
- Advertisement -
error: Content is protected !!