newsics.com
ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್ಗಳ ಗೆಲುವು ಸಾಧಿಸಿದೆ.
ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ ಪಂದ್ಯ ಆರಂಭವಾಯಿತು. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಫಾಫ್ ಪಡೆ, ರಜತ್ ಪಾಟಿದಾರ್ ಅವರ ಅಜೇಯ ಶತಕದಾಟದಿಂದ(112*) 20 ಓವರ್ಗಳಲ್ಲಿ 4 ವಿಕೆಟ್ಗೆ 207 ರನ್ ಗಳಿಸಿತ್ತು. ಈ ಗುರಿ ಬೆನ್ನೆಟ್ಟಿದ ಲಕ್ನೋ ತಂಡ 20 ಓವರ್ ಗಳಲ್ಲಿ 6 ವಿಕೆಟ್ಗೆ 193 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
ಈ ಸೋಲಿನ ಮೂಲಕ ರಾಹುಲ್ ಪಡೆ ಮನೆಗೆ ಮರಳಿದರೆ, ಬೆಂಗಳೂರು ಬಾಯ್ಸ್ ಮೇ 27ರಂದು ನಡೆಯಲಿರುವ ಕ್ವಾಲಿಫೈಯರ್ 2 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಸೆಣೆಸಲಿದ್ದಾರೆ.
ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ