Tuesday, March 9, 2021

ಮಠಕ್ಕೆ ಪೇಜಾವರ ಶ್ರೀ ಸ್ಥಳಾಂತರ

ಉಡುಪಿ: ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಪೇಜಾವರ ಶ್ರೀಗಳನ್ನು ಭಾನುವಾರ ಬೆಳಗ್ಗೆ ಏಳು ಗಂಟೆ ಹೊತ್ತಿಗೆ ಕೆಎಂಸಿ ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರಿಸಲಾಯಿತು.
ಪೊಲೀಸ್ ಬಿಗಿಭದ್ರತೆಯಲ್ಲಿ ಕೆಎಂಸಿ ವೈದ್ಯರ ತಂಡ ವೆಂಟಿಲೇಟರ್ ನೆರವಿನೊಂದಿಗೆ ಪೇಜಾವರ ಶ್ರೀಗಳನ್ನು ಅತ್ಯಾಧುನಿಕ ವಿಶೇಷ ಆಂಬ್ಯುಲೆನ್ಸ್ನಲ್ಲಿ ಸ್ಥಳಾಂತರಿಸಿತು. ಕೆಎಂಸಿ ಆಸ್ಪತ್ರೆಯಿಂದ ಐದು ಕಿಮೀ ದೂರದಲ್ಲಿರುವ ಪೇಜಾವರ ಮಠಕ್ಕೆ ಸ್ಥಳಾಂತರಿಸಲಾಯಿತು.
ಈ ಮಧ್ಯೆ, ಪೇಜಾವರ ಮಠವೂ ಸೇರಿದಂತೆ ಕೃಷ್ಣ ದೇಗುಲ ಸುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೆಎಂಸಿ ಆಸ್ಪತ್ರೆ ಬಳಿಯೂ ಬಿಗಿಭದ್ರತೆ ಮಾಡಲಾಗಿದೆ.
ಮಠದಲ್ಲಿ ನಿತ್ಯವೂ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಆಸ್ಥಾನ ಪೂಜೆ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥರ ನೇತೃತ್ವದಲ್ಲಿ ನೆರವೇರಿದೆ. ಈ ಪೂಜೆ ನಡೆಯುವ ಸಮೀಪದ ಕೊಠಡಿಯಲ್ಲೇ ಪೇಜಾವರ ಶ್ರೀಗಳ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಇನ್ನು, ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ಸೇರಿದಂತೆ ಗಣ್ಯರ ದಂಡೇ ಉಡುಪಿಯಲ್ಲಿದ್ದು, ಗಣ್ಯರೂ ಸೇರಿದಂತೆ ಎಲ್ಲ ಭಕ್ತರಿಗೆ ಪೇಜಾವರ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಶ್ರೀಗಳ ಆಸೆ: 
ಕಳೆದ ಸುಮಾರು ಹತ್ತು ದಿನಗಳಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶ್ವತೀರ್ಥ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಭಾನುವಾರ ಶ್ರೀಗಳನ್ನು ಸ್ಥಳಾಂತರಿಸುವ ನಿರ್ಧಾರಕ್ಕೆ ಬರಲಾಗಿದೆ. ಇದು, ಶ್ರೀಗಳ ಆಸೆ ಕೂಡ ಆಗಿತ್ತು” ಎಂದು ಮಠದ ಕಿರಿಯ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥರು ಶನಿವಾರ ರಾತ್ರಿ ಹೇಳಿದ್ದರು.
ಪೇಜಾವರ ಶ್ರೀ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಉಡುಪಿಯಲ್ಲೇ ತಂಗಿದ್ದು, ಭಾನುವಾರದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಉಡುಪಿಯಲ್ಲೇ ತಂಗಿದ್ದು, ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ಕೂಡ ಉಡುಪಿಗೆ ದೌಡಾಯಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.com ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ 8 ಹಂತಗಳಲ್ಲಿ ನಡೆಯುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ(ಮಾ.9) ವಜಾಗೊಳಿಸಿದೆ.ಕೇರಳ ಮತ್ತು ತಮಿಳುನಾಡು...

ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಸಾಧ್ಯತೆ

newsics.com ಡೆಹ್ರಾಡೂನ್:  ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನೀಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಸಂಜೆ ನಾಲ್ಕು ಗಂಟೆಗೆ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಇದಕ್ಕೊ ಮೊದಲು...

ಕೊರೋನಾ ಲಸಿಕೆ ಪಡೆದ 48 ಗಂಟೆ ತನಕ ವಿಮಾನ ಚಲಾಯಿಸುವಂತಿಲ್ಲ

newsics.com ನವದೆಹಲಿ:  ಕೊರೋನಾ ಲಸಿಕೆ ಸ್ವೀಕಾರ ಸಂಬಂಧ ವಿಮಾನಯಾನ ಸಿಬ್ಬಂದಿಗೆ ನಾಗರಿಕ ವಿಮಾನಯಾನ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಮಾನದ ಪೈಲಟ್ ಮತ್ತು ಇತರ ಸಿಬ್ಬಂದಿ ಕೊರೋನಾ ಲಸಿಕೆ ಪಡೆದಿದ್ದರೆ ಇದನ್ನು ಕಟ್ಟು ನಿಟ್ಟಾಗಿ...
- Advertisement -
error: Content is protected !!