ಉಡುಪಿ: ಪೇಜಾವರ ಶ್ರೀಗಳನ್ನು ನಾಳೆ ಬೆಳಗ್ಗೆ ಮಠಕ್ಕೆ ಸ್ಥಳಾಂತರಿಸಲಾಗುವುದು ಎಂದು ಪೇಜಾವರ ಮಠದ ಕಿರಿಯ ಶ್ರೀ ವಿಶ್ವಪ್ರಸನ್ನ ಶ್ರೀ ತಿಳಿಸಿದ್ದಾರೆ.
ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮಠದಲ್ಲೇ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.
ಮಠಕ್ಕೆ ಶ್ರೀಗಳನ್ನು ಸ್ಥಳಾಂತರಿಸುತ್ತಿರುವ ಹಿನ್ನೆಲೆಯಲ್ಲಿ ಮಠಕ್ಕೆ ಭಕ್ತರು ಆಗಮಿಸಬಾರದೆಂದು ಕಿರಿಯ ಶ್ರೀಗಳು ಮನವಿ ಮಾಡಿದ್ದಾರೆ.