ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ಮೆದುಳು ದುರ್ಬಲಗೊಳ್ಳುತ್ತಿದ್ದು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯರ ತಂಡ ತಿಳಿಸಿದೆ.
ಶನಿವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಶ್ರೀಗಳು ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದಾರೆ. ಕೃತಕ ಉಸಿರಾಟ ವ್ಯವಸ್ಥೆಯನ್ನು ಮುಂದುವರಿಸಲಾಗಿದೆ ಎಂದು ಆಸ್ಪತ್ರೆ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಪೇಜಾವರ ಶ್ರೀಗಳು ಡಿ.20 ರಿಂದಲೂ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ಹೊತ್ತಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ತೆರಳಲಿದ್ದಾರೆ.