Monday, April 12, 2021

ಆಯ್ದ ಕೊರೋನಾ ಸೋಂಕಿತರಿಗೆ ಇಟೋಲಿಜುಮ್ಯಾಬ್ ಬಳಸಲು ಅನುಮತಿ

ನವದೆಹಲಿ: ತೀವ್ರ ಉಸಿರಾಟದ ತೊಂದರೆ ಇರುವ ಕೋವಿಡ್ 19 ರೋಗಿಗಳಿಗೆ ಇಟೋಲಿಜುಮ್ಯಾಬ್ ಔಷಧ ಬಳಸಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮತಿ ನೀಡಿದೆ.
ಕೋವಿಡ್ 19 ರೋಗಿಗಳಿಗೆ ತೀವ್ರ ಉಸಿರಾಟದ ತೊಂದರೆ ಉಂಟಾದಲ್ಲಿ ನಿರ್ಬಂಧಿತ ತುರ್ತು ಬಳಕೆಗಾಗಿ ಚರ್ಮದ ಕಾಯಿಲೆ ಸೋರಿಯಾಸಿಸ್ ಗುಣಪಡಿಸಲು ಬಳಸುವ ಇಟೋಲಿಜುಮ್ಯಾಬ್ ಎಂಬ ಔಷಧವನ್ನು ಬಳಸಲು ಅನುಮತಿ ನೀಡಲಾಗಿದೆ ಎಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಡಾ.ವಿ.ಜಿ ಸೋಮನಿ ಹೇಳಿದ್ದಾರೆ. ಈ ಔಷಧ ಬಳಕೆಗೂ ಮುನ್ನ ರೋಗಿ ಅಥವಾ ಕುಟುಂಬ ಸದಸ್ಯರು ಅನುಮತಿ ನೀಡಬೇಕಾಗುತ್ತದೆ ಎಂದೂ ಅವರು ಹೇಳಿದ್ದಾರೆ.
ದೇಶದಲ್ಲಿ ಕೋವಿಡ್ 19 ರೋಗಿಗಳ ಪ್ರಾಯೋಗಿಕ ಪರೀಕ್ಷೆಗಳು ಸೈಟೊಕಿನ್ ಬಿಡುಗಡೆ ಸಿಂಡ್ರೋಮ್ ಚಿಕಿತ್ಸೆಗಾಗಿ ಶ್ವಾಸಕೋಶ ಶಾಸ್ತ್ರಜ್ಞರು, ಔಷಧ ಶಾಸ್ತ್ರಜ್ಞರು ಮತ್ತು ಏಮ್ಸ್’ನ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿಯು ತೃಪ್ತಿಕರವೆಂದು ಕಂಡುಕೊಂಡ ನಂತರ ಈ ಅನುಮೋದನೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದು ಈಗಾಗಲೇ ಕಳೆದ ಹಲವು ವರ್ಷಗಳಿಂದ ಸೋರಿಯಾಸಿಸ್ ಚಿಕಿತ್ಸೆಗಾಗಿ ಬಯೋಕಾನ್‌ನ ಅನುಮೋದಿತ ಔಷಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!