ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಪ್ರತಿಷ್ಟಿತ ಭಾರತೀಯ ವಿಜ್ಞಾನ ಕಾಂಗ್ರೆಸ್ ನ 107ನೇ ಅಧಿವೇಶನವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಮಾತನಾಡಿದ ಮೋದಿ, ಬೆಂಗಳೂರು ನಗರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಗುಣಗಾನ ಮಾಡಿದ ಪ್ರಧಾನಿ ಮೋದಿ ಬೆಂಗಳೂರು ನವೋದ್ಯಮದ ಹೆಗ್ಗುರುತು ಎಂದು ಬಣ್ಣಿಸಿದರು. ವಿಜ್ಞಾನ ಮತ್ತು ತಂತ್ರಜ್ಞಾನ ದೇಶದ ಅಭಿವೃದ್ದಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಸರ್ಕಾರ ಇದರ ಸರ್ವತೋಮುಖ ಅಭಿವೃದ್ದಿಗೆ ಎಲ್ಲ ನೆರವು ನೀಡಲಿದೆ ಎಂದು ಹೇಳಿದರು. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.