Monday, July 4, 2022

7 ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಚರ್ಚೆ

Follow Us

ನವದೆಹಲಿ: ಕೋವಿಡ್ 19 ಬಗ್ಗೆ ಏಳು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ಮಾತುಕತೆ ನಡೆಸಿದರು.
ಈ ವೇಳೆ, ಕೊರೋನಾ ಸೋಂಕಿನ ಪ್ರಮಾಣ, ಪೀಡಿತರ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳನ್ನು ಪಡೆದುಕೊಂಡರು. ಬಿಹಾರ, ಅಸ್ಸಾಂ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ ಮುಖ್ಯಮಂತ್ರಿ ಗಳ ಜತೆ ಪ್ರಧಾನಿ ನರೇಂದ್ರ ‌ಮೋದಿ ಮಾತುಕತೆ ನಡೆಸಿದರು.
ಇದೇ ವೇಳೆ ಬಿಹಾರ ಹಾಗೂ ಅಸ್ಸಾಂ ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಅವರು ಮಾಹಿತಿ ಪಡೆದುಕೊಂಡರು.
ದೇಶದಲ್ಲಿ ಕೊರೋನಾದ ತೀವ್ರತೆ ಅಥವಾ ಮಾರಣಾಂತಿಕತೆ ಕೇವಲ 2.9 ರಷ್ಟಿದ್ದು ಇದು ವಿಶ್ವದಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
24 ಗಂಟೆಯಲ್ಲಿ 39 ಸಾವಿರ ಕೊರೋನಾ ಪ್ರಕರಣ:
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 39 ಸಾವಿರ ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 10.7 ಲಕ್ಷ ಕ್ಕೆ ಏರಿದೆ.
ದೇಶದ ಒಟ್ಟು ಪ್ರಕರಣಗಳ ಪೈಕಿ 3,73,379 ಪ್ರಕರಣಗಳು ಸಕ್ರಿಯವಾಗಿದ್ದು, 6.7 ಲಕ್ಷ ಜನರು ಈಗಾಗಲೇ ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ.
ನಾಲ್ಕೇ ದಿನದಲ್ಲಿ 1 ಮಿಲಿಯನ್ ಮಂದಿಗೆ ಸೋಂಕು:
ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಮೂರು ಲಕ್ಷಕ್ಕೂ ಅಧಿಕ ಪ್ರಕರಣಗಳಿವೆ. ಮುಂಬೈವೊಂದರಲ್ಲೇ 1 ಲಕ್ಷ ಕೊರೋನಾ ಸೋಂಕಿತರಿದ್ದು ಪ್ರಕರಣಗಳ ಸಂಖ್ಯೆಯಲ್ಲಿ ಮಹಾರಾಷ್ಟ್ರ ಯುನೈಟೈಡ್ ಕಿಂಗ್ ಡಮ್ ಮೀರಿಸಿದೆ. ಯುನೈಟೆಡ್ ಕಿಂಗಡಮ್’ನಲ್ಲಿ ಈವರೆಗೆ 2.95 ಲಕ್ಷ ಪ್ರಕರಣಗಳು ದಾಖಲಾಗಿವೆ.
ವಿಶ್ವದಲ್ಲಿ ಇದುವರೆಗೂ 14 ಮಿಲಿಯನ್ ಜನರು ಕೊರೋನಾ ವೈರಸ್ ದಾಳಿಗೆ ಒಳಗಾಗಿದ್ದು 6,02,656 ಜನರನ್ನು ಬಲಿ ಪಡೆದಿದೆ. ಕೇವಲ ನಾಲ್ಕು ದಿನದಲ್ಲಿ ಕೊರೋನಾ 13 ಮಿಲಿಯನ್ ನಿಂದ 14 ಮಿಲಿಯನ್ ಪ್ರಕರಣಗಳಿಗೆ ಏರಿಕೆ ಕಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!