Saturday, October 16, 2021

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

Follow Us

newsics.com

ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು.

ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45 ರ ಸುಮಾರಿಗೆ ಹೊಸ ಸಂಸತ್ ಕಟ್ಟಡದ ನಿರ್ಮಾಣ ಸ್ಥಳ ಸೆಂಟ್ರಲ್ ವಿಸ್ಟಾಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಒಂದು ಗಂಟೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು.

ಈ ಭೇಟಿಯ ಬಗ್ಗೆ ಯಾವುದೇ ಪೂರ್ವ ಸೂಚನೆ ಅಥವಾ ಭದ್ರತಾ ವಿವರ ಇರಲಿಲ್ಲ ಎಂದು ತಿಳಿದುಬಂದಿದೆ.

ಡಿಸೆಂಬರ್ 10, 2020 ರಂದು ದೆಹಲಿಯ ಹೊಸ ಸಂಸತ್ ಭವನಕ್ಕೆ ಮೋದಿ ಶಂಕುಸ್ಥಾಪನೆ ಮಾಡಿದ್ದರು. 64,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರುವ ಹೊಸ ಕಟ್ಟಡವು 2022ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಯೋಜನೆಯ ಪ್ರಕಾರ ಡಿಸೆಂಬರ್ 2022ರ ಅಧಿವೇಶನವು ಹೊಸ ಸಂಸತ್ ನಲ್ಲಿ ನಡೆಯಲಿದೆ. ಸಂಸತ್ ಭವನ ನಿರ್ಮಾಣದ ಅಂದಾಜು ವೆಚ್ಚ 971 ಕೋಟಿ ರೂ. ಲೋಕಸಭೆಯು 888 ಸಂಸದರಿಗೆ ಮತ್ತು ರಾಜ್ಯಸಭೆಯಲ್ಲಿ 384 ಸಂಸದರಿಗೆ ಆಸನ ಸ್ಥಳವನ್ನು ಹೊಂದಿರುತ್ತದೆ.

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

ಹೆಚ್ಚಿದ ಗುಲಾಬ್ ಅಬ್ಬರ: ಇಬ್ಬರು‌ ಮೀನುಗಾರರ ಸಾವು, ಮಹಾರಾಷ್ಟ್ರದಲ್ಲಿ ಹೈ ಅಲರ್ಟ್

ಭತ್ತದ ಗದ್ದೆಗೆ ನುಗ್ಗಿದ ಕೆಎಸ್ಆರ್’ಟಿಸಿ ಬಸ್

ಸಕ್ರೆಬೈಲು ಬಿಡಾರದ ಹಿರಿಯ ಆನೆ ಗಂಗೆ ಸಾವು

ಕೆಕೆಆರ್​ ವಿರುದ್ಧ ಸಿಎಸ್’ಕೆಗೆ 2 ವಿಕೆಟ್​ಗಳ ಜಯ

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...
- Advertisement -
error: Content is protected !!