Saturday, April 17, 2021

ಲೇಹ್’ಗೆ ಭೇಟಿ ನೀಡಿದ ಮೋದಿ



ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಗ್ಗೆ ಲೇಹ್’ಗೆ ಭೇಟಿ ನೀಡಿದರು. ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಮತ್ತು ಭೂ ಸೇನಾ ಪಡೆ ಮುಖ್ಯಸ್ಥ ಜ. ಎಂ. ಎನ್ ನರವಣೆ ಪ್ರಧಾನಿಗಳ ಸಾಥ್ ನೀಡಿದ್ದರು.
ಸೇನಾ ಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಅವರು ಶುಕ್ರವಾರ ಭೇಟಿ ನೀಡುವ ಕಾರ್ಯಕ್ರಮ ಈ ಮೊದಲೇ ನಿಗದಿಯಾಗಿತ್ತು. ಆದರೆ ಪ್ರಧಾನಿ ಮೋದಿಯವರೂ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಗಾಲ್ವಾನ್ ಕಣಿವೆಯಲ್ಲಿ ಇತ್ತೀಚೆಗೆ ನಡೆದಿದ್ದ ಭಾರತ- ಚೀನಾ ಸಂಘರ್ಷದ ನಂತರ ಗಡಿ ಭಾಗದ ಸ್ಥಿತಿಗತಿಯ ಮಾಹಿತಿಯನ್ನು ಪ್ರಧಾನಿ ಪಡೆಯಲಿದ್ದಾರೆ. ಇತ್ತೀಚೆಗೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಲಡಾಖ್ ಗಡಿಯಲ್ಲಿ ನಮ್ಮ ನೆಲ ಕಬಳಿಸಲು ಬಂದಿದ್ದ ಚೀನಾ ಸೇನೆಗೆ ತಕ್ಕ ಉತ್ತರ ನೀಡಲಾಗಿದೆ ಎಂದು ಹೇಳಿದ್ದರು. ನಮ್ಮ ಸೈನಿಕರ ಬಲಿದಾನ ವ್ಯರ್ಥವಾಗಲು ನಾವು ಎಂದಿಗೂ ಬಿಡುವುದಿಲ್ಲ ಎಂದಿದ್ದರು. ಪ್ರಧಾನಿ ಮೋದಿ ಲೇಹ್ ಭೇಟಿ ಭಾರತೀಯ ಸೈನಿಕರಿಗೆ ಹೊಸ ಹುರುಪು ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!