Saturday, April 17, 2021

ರಾತ್ರಿ ಎಂಟು ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ ಎಂಟು ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೊರೋನಾ ನಿಯಂತ್ರಿಸಲು ದೇಶದಲ್ಲಿ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಮೂರನೇ ಹಂತ ಕೊನೆಗೊಳ್ಳಲು ಐದು ದಿನ ಮಾತ್ರ ಬಾಕಿ ಉಳಿದಿದೆ. ಸೋಮವಾರ ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಈ ಸಂಬಂಧ ಮಾತುಕತೆ ನಡೆಸಿದ್ದರು. ಈ ಮಾತುಕತೆ ಆಧಾರದಲ್ಲಿ ಲಾಕ್ ಡೌನ್ ನ ಮುಂದಿನ ಸ್ವರೂಪದ ಕುರಿತು ಪ್ರಧಾನಿ ಮೋದಿ ಮಾಹಿತಿ ನೀಡುವ ಸಾಧ್ಯತೆಗಳಿವೆ.  ನಿರ್ಬಂಧಿತ ವಲಯ ಹೊರತುಪಡಿಸಿ ಉಳಿದ ಎಲ್ಲ ವಲಯಗಳಲ್ಲಿ ಆರ್ಥಿಕ ಚಟುವಟಿಕೆ ಆರಂಭಿಸಲು ಕೇಂದ್ರ ಸರ್ಕಾರ ಒಲವು ಹೊಂದಿದೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!