Tuesday, April 13, 2021

ಕವಿ ಚನ್ನವೀರ ಕಣವಿಗೆ ಪತ್ನಿ ವಿಯೋಗ

ಬೆಳಗಾವಿ: ಪ್ರಖ್ಯಾತ ಕವಿ ಚನ್ನವೀರ ಕಣವಿ ಅವರ ಪತ್ನಿ, ಖ್ಯಾತ ಕಥೆಗಾರ್ತಿ, ಲೇಖಕಿ ಶಾಂತಾದೇವಿ ಕಣವಿ (88) ಶುಕ್ರವಾರ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ನಿಧನರಾದರು.
ಶಾಂತಾದೇವಿ ಕಣವಿ ಅವರು ಸಾಹಿತ್ಯ ಕ್ಷೇತ್ರದಲ್ಲೀ ತಮ್ಮದೇ ಆದ ಛಾಪು ಮೂಡಿಸಿದ್ದರು. ಅನೇಕ ಕಥೆ, ಕಾದಂಬರಿ, ಲೇಖನಗಳ ಮೂಲಕ ಉತ್ತರ ಕರ್ನಾಟಕದ ಭಾಷೆಯ ಸೊಗಡನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದವರು. ಮೂಲತಃ ಬೆಳಗಾವಿ ಜಿಲ್ಲೆಯ ಸಂಕೇಶ್ವರದ ಗಿಡ್ಡನರವರ್ ಮನೆತನದವರಾಗಿದ್ದ ಚನ್ನವೀರ ಕಣವಿ ಅವರನ್ನು ವರಿಸಿ ಅವರ ಸಾಹಿತ್ಯ ಸೃಷ್ಟಿಗೆ ಸ್ಫೂರ್ತಿಯಾಗಿದ್ದರು.
ಮೃತರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಹೆಣ್ಣು ಮಗಳನ್ನು ಇದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಧಾರವಾಡದಲ್ಲಿ ನಡೆಯಲಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!