ನವದೆಹಲಿ: ಜನವರಿ 26ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಣರಾಜ್ಯೋತ್ಸವದಂದು ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿರುವ 9 ಶಂಕಿತ ಉಗ್ರರ ಬಂಧನಕ್ಕೆ ದೆಹಲಿ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಶಂಕಿತ ಉಗ್ರರ ಚಿತ್ರಗಳನ್ನು ಕೂಡ ಬಿಡುಗಡೆ ಮಾಡಲಾಗಿದೆ. ಈ ಶಂಕಿತ ಉಗ್ರರನ್ನು ಬಂಧಿಸಲು ದೆಹಲಿ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ಕೂಡ ತೀವ್ರಗೊಳಿಸಿದ್ದಾರೆ ಎಂದು ವರದಿಯಾಗಿದೆ.