Wednesday, July 6, 2022

ಯುದ್ಧ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ- ಕಮಾಂಡರ್’ಗಳಿಗೆ ಸೂಚನೆ

Follow Us

ನವದೆಹಲಿ: ಯುದ್ಧ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಭಾರತೀಯ ಸೇನೆಯ ಕಮಾಂಡರ್’ಗಳಿಗೆ ಸೂಚನೆ ನೀಡಲಾಗಿದೆ.
ಪೂರ್ವ, ಪಶ್ಚಿಮ ಮತ್ತು ಉತ್ತರ ಕಮಾಂಡರ್’ಗಳಿಗೆ ಸೂಚನೆ ನೀಡಲಾಗಿದ್ದು, ಚೀನಾದೊಂದಿಗೆ ನಡೆಯುತ್ತಿರುವ ಗಡಿ ಉದ್ವಿಗ್ನತೆ ನಡುವೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಯಾವುದೇ ಸಂಭವನೀಯ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಕಮಾಂಡರ್’ಗಳಿಗೆ ಸೂಚನೆ ನೀಡಿದ್ದಾರೆ. ಅರುಣಾಚಲಪ್ರದೇಶದಲ್ಲಿ ಚೀನಾ ಗಡಿಗೆ ಹೊಂದಿಕೊಂಡಿರುವ ತೇಜ್ ಪುರಕ್ಕೆ ಭೇಟಿ ನೀಡಿದ್ದ ಅವರು ಈ ಸೂಚನೆ ನೀಡಿದ್ದಾರೆ.
ಗಡಿಯಿಂದ ಚೀನಾ ಸೇನೆ ಇನ್ನೂ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಯುದ್ಧಕ್ಕೆ ಸನ್ನದ್ಧವಾಗಿರುವಂತೆ ಭಾರತ ಸೇನಾ ಮುಖ್ಯಸ್ಥರು ಕಮಾಂಡರ್’ಗಳಿಗೆ ಸೂಚನೆ ನೀಡಿದ್ದಾರೆ.
ಯುದ್ಧ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಮಹತ್ವದ ಸೂಚನೆ ನೀಡಲಾಗಿದೆ. ಪೂರ್ವ, ಪಶ್ಚಿಮ ಮತ್ತು ಉತ್ತರ ಕಮಾಂಡರ್ ಗಳಿಗೆ ಈ ಕುರಿತಾಗಿ ಸೂಚನೆ ನೀಡಲಾಗಿದೆ. ಎಂತಹುದೇ ಸನ್ನಿವೇಶ ಬಂದರೂ ಸಿದ್ಧರಾಗಿರುವಂತೆ ಸೂಚಿಸಲಾಗಿದೆ.
ಸೇನೆಯ ಹಿರಿಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಅವರು, ಗಡಿರೇಖೆಯ ಬಳಿ ಚೀನಾ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಭಾರತದಿಂದ ಪರಿಸ್ಥಿತಿ ಎದುರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...
- Advertisement -
error: Content is protected !!