newsics.com
ಮೈಸೂರು: ಕನ್ನಡಿಗರ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಚ್ರಪತಿ ದ್ರೌಪದಿ ಮುರ್ಮು ಇಂದು ಚಾಲನೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಿ ಚಾಮುಂಡಿಗೆ ಪುಷ್ಪಾರ್ಚನೆ ಮಾಡುವ ಮೂಲಕ 413ನೇ ದಸರಾ ಮಹೋತ್ಸವ ಉದ್ಘಾಟಿಸಿದರು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವ ರಾಜ್ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಮೈಸೂರು ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಸಚಿವ ಸುನಿಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಚಾಮುಂಡಿ ದೇವಸ್ಥಾನದಲ್ಲಿ ತಾಯಿ ಚಾಮುಂಡಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶೇಷ ಪೂಜೆ ಸಲ್ಲಿಸಿದರು.
ಕೈ ಕೊಟ್ಟ ಅದೃಷ್ಟ: ಶಸ್ತ್ರ ಚಿಕಿತ್ಸೆಗೆ ಮುಂದಾಗಿರುವ ನಟಿ ಪೂಜಾ ಹೆಗ್ಡೆ