Saturday, November 27, 2021

ಮುಖ್ಯಮಂತ್ರಿಗಳ ಜತೆ ಪ್ರಧಾನಿ ವೀಡಿಯೊ ಸಂವಾದ ಆರಂಭ

Follow Us

ನವದೆಹಲಿ: ದೇಶದಲ್ಲಿ ಹೇರಲಾಗಿರುವ ಲಾಕ್ ಡೌನ್ ಮುಂದುವರಿಸುವ ನಿಟ್ಟಿನಲ್ಲಿ ರಾಜ್ಯಗಳ  ಅಭಿಪ್ರಾಯಪಡೆಯುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವೀಡಿಯೋ ಸಂವಾದ ಆರಂಭಿಸಿದ್ದಾರೆ. 20ಕ್ಕೂ ಹೆಚ್ಚು ರಾಜ್ಯಗಳು ಲಾಕ್ ಡೌನ್ ವಿಸ್ತರಿಸುವ ಒಲವು ಹೊಂದಿದ್ದು, ಈ ಸಂಬಂಧ ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಿವೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯಪಡೆದ ಬಳಿಕ ಕೇಂದ್ರ ಸರ್ಕಾರ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ಪ್ರಧಾನಿ ಮಾಸ್ಕ್ ಧರಿಸಿ ಇಂದಿನ ಸಭೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಕೊರೋನಾ ತಡೆಗಟ್ಟಲು ಮನೆಯಲ್ಲಿಯೇ ಸಿದ್ದಪಡಿಸಲಾದ ಮಾಸ್ಕ್ ಧರಿಸಿ ಎಂಬ ಅಭಿಯಾನ ಆರಂಭಗೊಂಡಿದ್ದು, ಇದಕ್ಕೆ ಪೂರಕವಾಗಿ ಪ್ರಧಾನಿ ಮಾಸ್ಕ್ ಧರಿಸಿ ಸಭೆಯಲ್ಲಿ ಭಾಗವಹಿಸಿದ್ದಾರೆ.  ಸದ್ಯದ ಪರಿಸ್ಥಿತಿ ವಿಶ್ಲೇಷಿಸಿದರೆ ಲಾಕ್ ಡೌನ್ ಮುಂದುವರಿಯುವ ಸಾಧ್ಯತೆ ನಿಚ್ಚಳವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!