ಬೆಂಗಳೂರು: ಮಾರ್ಚ್ ಎರಡನೇ ವಾರದಲ್ಲಿ 7ನೇ ತರಗತಿಗೆ ಈ ವರ್ಷ ಪಬ್ಲಿಕ್ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತಿಳಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಇಲಾಖೆ, ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 7ನೇ ತರಗತಿ ವಾರ್ಷಿಕ ಪರೀಕ್ಷೆಗಳು ಈ ವರ್ಷ ಒಂದೇ ಸಮಯದಲ್ಲಿ ನಡೆಯಲಿದ್ದು ಪ್ರಶ್ನೆ ಪತ್ರಿಕೆಗಳನ್ನು ಒಂದೇ ಕೇಂದ್ರದಲ್ಲಿ ತಯಾರಿಸಿ ನಂತರ ಅದನ್ನು ಎಲ್ಲಾ ಶಾಲೆಗಳಿಗೆ ವಿತರಿಸಲಾಗುವುದು ಎಂದು ಹೇಳಿದೆ.
ಪರೀಕ್ಷೆಯನ್ನು ವಿದ್ಯಾರ್ಥಿಗಳ ಆಯಾ ಶಾಲೆಗಳಲ್ಲಿ, ಆಯಾ ತರಗತಿಗಳಲ್ಲಿ ನಡೆಸಲಾಗುತ್ತದೆ. ಅದೇ ಶಾಲೆಯ ಶಿಕ್ಷಕರು ಪರೀಕ್ಷಾರ್ಥಿಗಳಾಗಿರುತ್ತಾರೆ. ಮೌಲ್ಯಮಾಪನ ಕೂಡ ಶಾಲಾ ಮಟ್ಟದಲ್ಲಿಯೇ ಇರುತ್ತದೆ.
ರಾಷ್ಟ್ರೀಯ ಶಿಕ್ಷಣ ನೀತಿ 2019ರ ಪ್ರಕಾರ, ವಿದ್ಯಾರ್ಥಿಗಳಲ್ಲಿ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಅವರು ಹತ್ತನೇ ತರಗತಿ ತಲುಪುವುದರ ಮೊದಲು ಅವರಲ್ಲಿ ಪಬ್ಲಿಕ್ ಪರೀಕ್ಷೆ ಎದುರಿಸುವ ಸಾಮರ್ಥ್ಯ ಬೆಳೆಸಲು ಶಿಕ್ಷಣ ಸಚಿವರ ನೇತೃತ್ವದಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ.
ಆತಂಕ ಬೇಡ:
7ನೇ ತರಗತಿಯಲ್ಲಿ ಈ ಬಾರಿ ಪಬ್ಲಿಕ್ ಪರೀಕ್ಷೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ, ಗಾಬರಿಪಡುವ ಅಗತ್ಯವಿಲ್ಲ ಎಂದೂ ಇಲಾಖೆ ಮನವಿ ಮಾಡಿದೆ.
ಈ ವರ್ಷ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ; ಮಾರ್ಚ್ 2ನೇ ವಾರ ಎಕ್ಸಾಂ
Follow Us