Tuesday, April 13, 2021

ಪಿಯು ಪರೀಕ್ಷೆ; 23,635 ವಿದ್ಯಾರ್ಥಿಗಳು ಗೈರು

ಬೆಂಗಳೂರು: ರಾಜ್ಯದಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯಲ್ಲಿ ಒಟ್ಟು 23,635 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಇಂಗ್ಲೀಷ್ ಪರೀಕ್ಷೆಗೆ ಒಟ್ಟು 5,96,300 ವಿದ್ಯಾರ್ಥಿಗಳು ಹಾಜರಾಗಬೇಕಿತ್ತು. ಆದರೆ, 5,72,665 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ಮೂಲಕ 23,635 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 1,748 ವಿದ್ಯಾರ್ಥಿಗಳು, ಕೊಡಗಿನಲ್ಲಿ ಅತಿ ಕಡಿಮೆ ಅಂದರೆ 99 ವಿದ್ಯಾರ್ಥಿಗಳು ಗೈರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳು ನಡೆಸಲಿರುವ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗುವುದು. ಯಾವುದೇ ವಿದ್ಯಾರ್ಥಿ ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!