Saturday, November 27, 2021

ನಾಳೆಯ ಪಿಯುಸಿ ಪರೀಕ್ಷೆ ಮುಂದೂಡಿಕೆ

Follow Us

ಬೆಂಗಳೂರು: ನಾಳೆಯೇ (ಮಾ.23) ಪರೀಕ್ಷೆ ನಡೆಸುವುದಾಗಿ ಹೇಳಿದ್ದ ಸರ್ಕಾರ ಸಂಜೆ ಹೊತ್ತಿಗೆ ಪರಿಸ್ಥಿತಿಯ ಗಂಭೀರತೆ ಅರಿತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕೂಡ ಮುಂದೂಡಿದೆ.
ನಾಳೆ ನಡೆಯಬೇಕಿದ್ದ ಇಂಗ್ಲೀಷ್ ಪರೀಕ್ಷೆಯ ದಿನಾಂಕವನ್ನು ಮಾರ್ಚ್ 31 ರ ನಂತರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಭಾನುವಾರ ಕೆಲವೇ ಹೊತ್ತಿನ ಮುಂಚೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ನಾಳೆ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದರು.
ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡುವುದಕ್ಕೆ ಸಂಬಂಧಪಟ್ಟಂತೆ ಭಾನುವಾರ ಮಧ್ಯಾಹ್ನ ಇಲಾಖೆಯ ಅಧಿಕಾರಿಗಳ ಜತೆಗೆ ಸಭೆ ಸೇರಿದ ಬಳಿಕ ಮಾರ್ಚ್ 31ಕ್ಕೆ ಮುಂದೂಡಿಕೆ ಮಾಡಲು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈ ಕುರಿತಂತೆ ಸ್ಪಷ್ಟ ಪಡಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ನಾಳೆ ನಡೆಯಬೇಕಿದ್ದಂತ ಪಿಯು ಪರೀಕ್ಷೆಗಳನ್ನು ಮಾರ್ಚ್ 31ರ ನಂತರ ನಡೆಸಲು ತೀರ್ಮಾನಿಸಲಾಗಿದೆ. ಸೋಮವಾರ (ಮಾ.23) ದ್ವಿತೀಯ ಪಿಯುಸಿಯ ಅಂತಿಮ ಪರೀಕ್ಷೆ ಇದ್ದ ಕಾರಣ ಅದನ್ನು ನಡೆಸಬೇಕೆಂಬ ಚಿಂತನೆಯಲ್ಲಿ ಶಿಕ್ಷಣ ಇಲಾಖೆ ಇತ್ತಾದರೂ 9 ಜಿಲ್ಲೆಗಳಲ್ಲಿ ಲಾಕ್‌ ಡೌನ್‌ ಘೋಷಣೆಯಾಗಿದ್ದ ಕಾರಣ ಆ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪಲು ತೊಂದರೆ ಎದುರಾಗಬಹುದೆಂಬ ಕಾರಣಕ್ಕೆ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಸೂಚನೆಯಂತೆಅಂತಿಮವಾಗಿ ಪರೀಕ್ಷೆ ಮುಂದೂಡಲು ತೀರ್ಮಾನ ಕೈಗೊಳ್ಳಲಾಯಿತು.
ನಾಳೆ ನಡೆಯಬೇಕಿದ್ದ ಇಂಗ್ಲೀಷ್‌ ಪರೀಕ್ಷೆಯನ್ನು 5 ಲಕ್ಷದ 95 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಬರೆಯಬೇಕಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!