Monday, April 12, 2021

ಪುರಿ ಜಗನ್ನಾಥ ರಥಯಾತ್ರೆಯ ಧಾರ್ಮಿಕ ವಿಧಿ ವಿಧಾನ ಆರಂಭ

ಪುರಿ:  ವಿಶ್ವ ಪ್ರಸಿದ್ಧ ಪುರಿ ಜಗನ್ನಾಥ ರಥಯಾತ್ರೆಗೆ ಸಂಬಂಧಿಸಿದ ಧಾರ್ಮಿಕ ವಿಧಿ ವಿಧಾನಗಳು ಮುಂಜಾನೆ ಮೂರು ಗಂಟೆಯಿಂದಲೇ ಆರಂಭವಾಗಿವೆ. ಇಂದು ಸುಪ್ರೀಂ ಕೋರ್ಟ್ ನ ಕಟ್ಟು ನಿಟ್ಟಿನ ಸೂಚನೆ ಪಾಲಿಸಿ ರಥಯಾತ್ರೆ ನಡೆಯಲಿದೆ. ಪುರಿ ದೇವಸ್ಥಾನದಲ್ಲಿ ಶತಮಾನಗಳಿಂದ ಚಾಚೂ ತಪ್ಪದೆ ಪಾಲಿಸಿಕೊಂಡು ಬರುತ್ತಿರುವ ಎಲ್ಲ ಧಾರ್ಮಿಕ ಆಚರಣೆಗಳು ಇದೀಗ ಆರಂಭವಾಗಿದೆ. ಮಧ್ಯಾಹ್ನ 12 ಗಂಟೆಗೆ ಮೂರು ರಥಗಳು ದೇವಸ್ಥಾನದಿಂದ ಹೊರಡಲಿವೆ. ಈ ಮಧ್ಯೆ ಪುರಿಯಲ್ಲಿ ಬುಧವಾರದ ತನಕ ಸಂಪೂರ್ಣ ಲಾಕ್ ಡೌನ್ ಜಾರಿಮಾಡಲಾಗಿದೆ. ಭಕ್ತರು ದೇವಸ್ಥಾನಕ್ಕೆ ಆಗಮಿಸುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.  ಪ್ರತಿ ವರ್ಷ 10 ಲಕ್ಷಕ್ಕೂ ಹೆಚ್ಚು ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು. ಆದರೆ ಈ ಬಾರಿ ಕೊರೋನಾ ಜಗನ್ನಾಥನ ರಥಯಾತ್ರೆಗೆ ಅಡ್ಡಿ ತಂದಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!