newsics.com
ಬೆಂಗಳೂರು: ರಾಜ್ಯದಲ್ಲಿ ಶಾಲಾ- ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ಮಾಹಿತಿ ನೀಡಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಗುರುವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿ ಯುಜಿಸಿ ಈಗಾಗಲೇ ಮಾರ್ಗಸೂಚಿ ನೀಡಿದೆ. ಅದರಂತೆ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಜತೆ ಚರ್ಚಿಸಿದ ನಂತರ ಸ್ಪಷ್ಟ ಮಾಹಿತಿ ನೀಡಲಾಗುವುದು ಎಂದರು.
ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶೈಕ್ಷಣಿಕ ಚಟುವಟಿಕೆ ಆರಂಭಿಸಲಾಗಿದೆ. ಅದರ ಮುಂದುವರೆದ ಭಾಗವಾಗಿ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಎಂದಿನಿಂದ ಹಾಜರಾಗಬೇಕು ಎಂಬ ಬಗ್ಗೆ ಸಂಬಂಧಿಸಿದವರ ಜತೆ ಚರ್ಚಿಸಲಾಗುವುದು. ಕೋವಿಡ್ ಮಾರ್ಗಸೂಚಿಯ ಪ್ರಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಅವೆಲ್ಲವುಗಳ ಸಾಧಕ- ಬಾಧಕಗಳನ್ನು ನೋಡಿಕೊಂಡೇ ತರಗತಿಗಳನ್ನು ಆರಂಭಿಸಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.
ಶಾಲಾ ಕಾಲೇಜು ಆರಂಭಕ್ಕೆ ಸರ್ಕಾರದಿಂದ ಶೀಘ್ರ ಸ್ಪಷ್ಟ ಮಾಹಿತಿ- ಡಿಸಿಎಂ
Follow Us