ನವದೆಹಲಿ: ಭಾರತದ ರಕ್ಷಣಾ ಬಲ ಹೆಚ್ಚಿಸಲಿರುವ ಐದು ರಫೇಲ್ ಯುದ್ಧ ವಿಮಾನಗಳು ಹರ್ಯಾಣದ ಅಂಬಾಲದಲ್ಲಿರುವ ವಾಯುನೆಲೆಗೆ ಬುಧವಾರ (ಜುಲೈ 29) ಬಂದಿಳಿದವು. ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಹರಿಯಾಣದ ಅಂಬಾಲ ವಾಯುನೆಲೆಗೆ ರಫೇಲ್ ವಿಮಾನ ಆಗಮಿಸಿತು. ವಾಯುಪಡೆ ಮುಖ್ಯಸ್ಥರು ಸೇರಿದಂತೆ ಹಿರಿಯ ಸೇನಾ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರತದಲ್ಲಿನ ಫ್ರಾನ್ಸ್ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಗಳು ಈ ಸಂಭ್ರಮಕ್ಕೆ ಸಾಕ್ಷಿಯಾದರು.
ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್ಕೆಎಸ್ ಭದೌರಿಯಾ) ಬರಮಾಡಿಕೊಂಡರು.
ಫ್ರಾನ್ಸ್ನಿಂದ ಹೊರಟಿದ್ದ ಮೊದಲ ಹಂತದ ಐದು ರಫೇಲ್ ಯುದ್ಧ ವಿಮಾನಗಳು ಬುಧವಾರ ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದಿಳಿದಿವೆ. ಫ್ರಾನ್ಸ್ ಮೂಲದ ಡಸಾಲ್ಟ್ ಕಂಪನಿ ನಿರ್ಮಿತ 5 ರಫೇಲ್ ಫೈಟರ್ ಜೆಟ್ ವಿಮಾನಗಳು ಇದಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಕಿ ಎರಡು ವಿಮಾನಗಳು 2 ಸೀಟರ್ ತರಬೇತಿ ವಿಮಾನಗಳಾಗಿದ್ದು, 3 ಸಿಂಗಲ್ ಸೀಟರ್ ಫೈಟರ್ ಜೆಟ್ ಗಳಾಗಿವೆ. ಫ್ರೆಂಚ್ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಶನ್ ಕಾರ್ಖಾನೆ ನಿರ್ಮಿಸಿದ ರಫೇಲ್ ಫೈಟರ್ ಜೆಟ್ಗಳು ದಕ್ಷಿಣ ಫ್ರಾನ್ಸ್ನ ಬೋರ್ಡಾಕ್ಸ್ ನಗರದ ಮೆರಿಗ್ನಾಕ್ ವಾಯು ನೆಲೆಯಿಂದ ಜುಲೈ 27ರಂದು ಹೊರಟಿದ್ದವು.
ಪಾಕಿಸ್ತಾನ ವಾಯುಪ್ರದೇಶದ ಮೇಲೆ ಹಾರಾಟ ನಡೆಸದೆ ಸುತ್ತು ಬಳಸಿ ಈ ವಿಮಾನ ಭಾರತಕ್ಕೆ ಆಗಮಿಸಿದೆ. ಭಾರತದ ವಾಯು ಪ್ರದೇಶ ಪ್ರವೇಶಿಸಿದ ಕೂಡಲೇ ರಫೇಲ್ ಯುದ್ಧ ವಿಮಾನ ಅರಬಿ ಸಮುದ್ರದಲ್ಲಿ ಲಂಗರು ಹಾಕಿದ ಐಎನ್ಎಸ್ ಕೊಲ್ಕತ್ತಾ ಜತೆ ಸಂಪರ್ಕ ಸಾಧಿಸಿತು. ತಕ್ಷಣ ಟ್ವೀಟ್ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಕ್ಕಿಗಳು ಭಾರತ ಪ್ರವೇಶಿಸಿದೆ ಎಂದು ಹೇಳಿದರು.
ಮೊದಲ ಹಂತವಾಗಿ ಐದು ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಂಬಾಲ ವಾಯುನೆಲೆ ಸುತ್ತಮುತ್ತಲಿನ ಐದು ಹಳ್ಳಿಗಳಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ
#WATCH: Five #Rafale jets in the Indian airspace, flanked by two Su-30MKIs (Source: Raksha Mantri's Office) pic.twitter.com/hCoybNQQOv
— ANI (@ANI) July 29, 2020