ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಹಾಗೂ ಸಂಜನಾ ಇನ್ನಷ್ಟು ದಿನ ಪರಪ್ಪನ ಅಗ್ರಹಾರದಲ್ಲೇ ಕಳೆಯಬೇಕಿದ್ದು, ಇಬ್ಬರು ನಟಿಯರ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 24 ಕ್ಕೆ ಮುಂದೂಡಿಕೆಯಾಗಿದೆ.
ಕಳೆದ ವಿಚಾರಣೆ ವೇಳೆ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ಆಕ್ಷೇಪಣೆ ಸಲ್ಲಿಸಲು ಸಿಸಿಬಿ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತ್ತು. ಇಂದು ಸಿಸಿಬಿ 12 ಪುಟಗಳ ಆಕ್ಷೇಪಣಾ ಅರ್ಜಿ ಸಲ್ಲಿಸಿದೆ. ಆ ಬಳಿಕ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 24 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ನ್ಯಾಯಾಲಯದ ಈ ಆದೇಶದಿಂದ ನಟಿಯರಾದ ಸಂಜನಾ ಹಾಗೂ ರಾಗಿಣಿ ಇನ್ನು ಮೂರು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ನಟಿ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿ ವಿಚಾರಣೆ ಸೆ.24 ಕ್ಕೆ ಮುಂದೂಡಿಕೆ
Follow Us