ಚಾಮರಾಜನಗರ: ಬಾಹುಬಲಿಯಂತ ಹಿಟ್ ಚಿತ್ರ ನೀಡಿದ ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ ಚಾಮರಾಜನಗರದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ತಮ್ಮ ಪತ್ನಿ ಸಮೇತ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿದ ಎಸ್.ಎಸ್
ರಾಜಮೌಳಿ, ಬಳಿಕ ಬಂಡೀಪುರ ಅರಣ್ಯ ವೀಕ್ಷಣೆಗೆ ತೆರಳಿದರು. ಹುಲಿ ಸಂರಕ್ಷಿತ ಪ್ರದೇಶಕ್ಕೂ ಭೇಟಿ ನೀಡಿ ಸಿಬ್ಬಂದಿಗಳ ಜೊತೆ ಕೆಲಕಾಲ ಮಾತುಕತೆ ನಡೆಸಿ ಪೋಟೋ ತೆಗೆಸಿಕೊಂಡು ಸಂಭ್ರಮಿಸಿದರು.
ಕೆಲ ದಿನಗಳ ಹಿಂದೆಯಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿದ್ದ ರಾಜಮೌಳಿ ಕುಟುಂಬ ಈಗ ಚೇತರಿಸಿಕೊಂಡಿದೆ.ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ.
ಸಧ್ಯ ರಾಜಮೌಳಿ ಆರ್.ಆರ್. ಆರ್ ಸಿನಿಮಾ ನಿರ್ಮಿಸುತ್ತಿದ್ದು, ಕೊರೋನಾದಿಂದ ಚಿತ್ರೀಕರಣ ಸ್ಥಗಿತಗೊಂಡಿದೆ.
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ರಾಜಮೌಳಿ
Follow Us