newsics.com
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ಮೀಸಲಿಡುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿಯೂ ಗುರುವಾರ ರಾತ್ರಿ ಅನುಮೋದನೆ ದೊರೆತಿದೆ.
ಲೋಕಸಭೆಯಲ್ಲಿ ಬುಧವಾರವಷ್ಟೇ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕರಿಸಲಾಗಿತ್ತು. ‘ನಾರಿ ಶಕ್ತಿ ವಂದನಾ ಅಧಿನಿಯಮಕ್ಕೆ
(Nari Shakti Vandan Adhiniyam)’ ರಾಜ್ಯಸಭೆಯು ಸರ್ವಾನುಮತದಿಂದ ಅನುಮೋದನೆ ನೀಡಿದೆ.
ವಿಧೇಯಕದ ಪರ 215 ಸಂಸದರು ಮತ ಚಲಾಯಿಸಿದರೆ, ವಿರುದ್ಧ ಯಾವ ಸಂಸದರೂ ಮತ ಚಲಾಯಿಸಲಿಲ್ಲ.
ಮಸೂದೆಗೆ ಉಭಯ ಸದನಗಳಲ್ಲಿ ಸರ್ವಾನುಮತದ ಅನುಮೋದನೆ ದೊರೆತಿದ್ದು, ಮುಂದಿನ ಹಂತದಲ್ಲಿ ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಿಕೊಡಲಾಗುತ್ತದೆ. ರಾಷ್ಟ್ರಪತಿಗಳ ಸಹಿ ದೊರೆತ ನಂತರ ‘ನಾರಿ ಶಕ್ತಿ ವಂದನ್ ಕಾಯ್ದೆ’ ಕಾನೂನಾಗಿ ಜಾರಿಯಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿ, ಮಸೂದೆಯಿಂದ ಮಾತ್ರ ಮಹಿಳಾ ಶಕ್ತಿಗೆ ವಿಶೇಷ ಗೌರವ ಸಿಗುತ್ತಿಲ್ಲ. ಈ ಮಸೂದೆಯ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳ ಸಕಾರಾತ್ಮಕ ಚಿಂತನೆಯು ನಮ್ಮ ದೇಶದ ಮಹಿಳಾ ಶಕ್ತಿಗೆ ಹೊಸ ಶಕ್ತಿಯನ್ನು ನೀಡುತ್ತದೆ. ಮಹಿಳಾ ನಾಯಕತ್ವವೇ ಉಜ್ವಲ ಭವಿಷ್ಯದ ಭರವಸೆ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಸೂದೆ ಅಂಗೀಕಾರಗೊಂಡಿರುವುದು ಭಾರತೀಯ ರಾಜಕೀಯದಲ್ಲಿ ಒಂದು ಮೈಲಿಗಲ್ಲು ಎಂದು ಹೇಳಿದರು.
ಬರ ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆಗೆ ನಿರ್ಧಾರ: ಡಾ. ಎಚ್.ಸಿ. ಮಹದೇವಪ್ಪ
ಅ.13ಕ್ಕೆ ದೇಶದ ಎಲ್ಲೆಡೆ ಮಲ್ಟಿಫ್ಲೆಕ್ಸ್‌ನಲ್ಲಿ ಟಿಕೆಟ್ ದರ 99 ರೂ. ಮಾತ್ರ