newsics.com
ಬೆಂಗಳೂರು: ಮಾರಕ ಕೊರೋನಾ ರಾಜ್ಯದಲ್ಲಿ ನೂತನ ಸಂಸತ್ ಸದಸ್ಯರೊಬ್ಬರನ್ನು ಬಲಿ ಪಡೆದುಕೊಂಡಿದೆ. ರಾಜ್ಯದ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ (55) ಕೊರೋನಾಕ್ಕೆ ಬಲಿಯಾಗಿದ್ದಾರೆ. 15 ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಕೇವಲ ಒಂದು ತಿಂಗಳ ಹಿಂದೆ ಅವರು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಅವರ ಜತೆ ಗಸ್ತಿ ಅವರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ಗಸ್ತಿ ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಗಸ್ತಿ ಅವರು ಮೂಲತ: ರಾಯಚೂರು ಜಿಲ್ಲೆಯ ಲಿಂಗಸಗೂರು ಸಮೀಪದ ಗಸ್ತಿ ನಿವಾಸಿಯಾಗಿದ್ದರು.