Saturday, December 10, 2022

ಕುಸ್ತಿಯಲ್ಲಿ ಚಿನ್ನ ಗೆದ್ದ ರವಿ ದಹಿಯಾ, ಭಾರತಕ್ಕೆ ಸಿಕ್ತು 10 ಗೋಲ್ಡ್ ಮೆಡಲ್

Follow Us

newsics.com

ಬರ್ಮಿಂಗ್ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್- 2022ರಲ್ಲಿ ಪುರುಷರ 57 ಕೆಜಿ ತೂಕ ವಿಭಾಗದಲ್ಲಿ ರವಿ ದಹಿಯಾ ಚಿನ್ನದ ಪದಕ ಗೆದ್ದಿದ್ದಾರೆ.

ಶನಿವಾರ ನಡೆದ ಫೈನಲ್‌ನಲ್ಲಿ ರವಿ ಅವರು ನೈಜೀರಿಯಾ ಆಟಗಾರನನ್ನು ತಾಂತ್ರಿಕ ದಕ್ಷತೆಯ ಆಧಾರದ ಮೇಲೆ ಸೋಲಿಸಿ ಪದಕ ಗೆದ್ದರು. ಈ ಹಿಂದೆ ಟೋಕಿಯೊ ಒಲಿಂಪಿಕ್‌ನಲ್ಲಿ ರವಿ ದಹಿಯಾ ಬೆಳ್ಳಿ ಪದಕ ಗೆದ್ದಿದ್ದರು.

ನೈಜೀರಿಯಾ ಆಟಗಾರ ದಾಳಿ ನಡೆಸಿದರಾದರೂ ರವಿ ಪ್ರಬಲ ಆಟ ಪ್ರದರ್ಶಿಸಿ ಅವರನ್ನು ಬಲೆಗೆ ಬೀಳಿಸಿದರು. ಎದುರಾಳಿಯ ಪಾದಗಳನ್ನು ಹಿಡಿದು ನೆಲಕ್ಕುರುಳಿಸಿ ಅಂಕವನ್ನು 10-0ಗೆ ಏರಿಸಿದರು. ಈ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ೨೦೨೨ರ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತದ 10ನೇ ಚಿನ್ನದ ಪದಕ ಇದಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...

ಇಂಡಿಗೋ ವಿಮಾನದಲ್ಲಿ ಹರಿದ ಸೀಟು: ಪೇಟಿಎಂ‌ ಸಿಇಒಗೆ ಅಚ್ಚರಿ!

newsics.com ಮುಂಬೈ: ನೀವು ಬಸ್‌ನಲ್ಲೋ, ಆಟೋದಲ್ಲೋ ಹರಿದ ಸೀಟುಗಳನ್ನು ನೋಡಿರಬಹುದು. ಆದರೆ ವಿಮಾನದಲ್ಲೂ ಹರಿದ ಸೀಟಿನ ಚಿತ್ರವನ್ನು ಪೇಟಿಎಂ ಸಿಇಒ Paytm CEO ಹಂಚಿಕೊಂಡಿದ್ದಾರೆ. 'ಈ ಏರ್‌ಲೈನ್‌ನಲ್ಲಿ ಮಾತ್ರ ಇಂತಹ ಹರಿದ ಸೀಟನ್ನು ಮೊದಲು ನೋಡಲಾಗಿದೆ'...
- Advertisement -
error: Content is protected !!