Saturday, April 17, 2021

ರಿಯಾಲಿಟಿ ಶೋ ವಿಜೇತೆ ಮೇಬಿನಾ ಮೈಕಲ್ ಇನ್ನಿಲ್ಲ

ಬೆಂಗಳೂರು: ಖಾಸಗಿ ವಾಹಿನಿಯ ರಿಯಾಲಿಟಿ ಶೋ ಪ್ಯಾಟೆ ಹುಡುಗಿಯರ ಹಳ್ಳಿ ಲೈಫ್ ಸೀಸನ್ 4ರ ವಿಜೇತೆ ಮಡಿಕೇರಿ ಮೂಲದ ಕಿರುತೆರೆ ನಟಿ ಮೇಬಿನಾ ಮೈಕಲ್ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಸ್ನೇಹಿತರ ಜತೆ ಸೋಮವಾರಪೇಟೆಗೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75 ದೇವಿಹಳ್ಳಿ ಬಳಿ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಗಾಯಗೊಂಡಿದ್ದ ಮೇಬಿನಾ ಅವರನ್ನು ಪ್ರಥಮ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ‌ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸುವ ವೇಳೆ ಮೇಬಿನಾ ಸಾವನ್ನಪ್ಪಿದ್ದಾರೆ‌. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!