Tuesday, April 13, 2021

ನಕ್ಸಲ್ ನಂಟು; ಛತ್ತೀಸ್’ಗಢ ಬಿಜೆಪಿ ಮುಖಂಡ ಬಂಧನ

ರಾಯಪುರ್: ನಕ್ಸಲರ ಜತೆ ನಂಟು ಹೊಂದಿದ್ದ ಆರೋಪದ ಮೇಲೆ ದಂತೇವಾಡದ ಬಿಜೆಪಿ ಮುಖಂಡ ಮತ್ತು ಆತನ ಸಹಚರನನ್ನು ಭಾನುವಾರ ಛತ್ತೀಸ್’ಗಢ ಪೊಲೀಸರು ಬಂಧಿಸಿದ್ದಾರೆ.
ದಂತೇವಾಡ ಬಿಜೆಪಿ ಉಪಾಧ್ಯಕ್ಷ ಜಗತ್ ಪೂಜಾರಿ ಬಂಧಿತ ಆರೋಪಿ. ಅಬುಜ್ಮಡ್ ನಲ್ಲಿರುವ ನಕ್ಸಲರಿಗೆ ಟ್ರಾಕ್ಟರ್, ಸರಕು ಮತ್ತು ಇತರ ಸಾಮಗ್ರಿಗಳನ್ನು ವ್ಯವಸ್ಥೆ ಮಾಡಿರುವ ಬಗ್ಗೆ ಜಿಲ್ಲಾ ಪೊಲೀಸರಿಗೆ ಖಚಿತ ಮಾಹಿತಿ ದೊರೆತ ನಂತರ ಬಿಜೆಪಿ ಮುಖಂಡ ಪೂಜಾರಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಪೂಜಾರಿ ಅವರು ಈ ಪ್ರದೇಶದ ವಿವಿಧ ಗುತ್ತಿಗೆ ಕಾಮಗಾರಿಗಳನ್ನು ಮಾಡಿಸುತ್ತಿದ್ದಾರೆ. ಹೀಗಾಗಿ ಮಾವೋವಾದಿಗಳಿಗೆ ಅವರು ಪೂರೈಸುತ್ತಿರುವ ವಿವಿಧ ವಸ್ತುಗಳ ಬಗ್ಗೆ ನಾವು ಮಾಹಿತಿ ಪಡೆಯುತ್ತಿದ್ದೇವೆ ಎಂದು ದಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ಹೇಳಿದ್ದಾರೆ.
ಕೆಲವು ಮಧ್ಯವರ್ತಿಗಳ ಮೂಲಕ ಇತ್ತೀಚೆಗೆ 100 ರೇಡಿಯೋ ಸೆಟ್‌ಗಳು, ಪ್ರಿಂಟರ್, ಲ್ಯಾಪ್‌ಟಾಪ್‌ಗಳನ್ನು ಮತ್ತು ಇತರ ವಸ್ತುಗಳನ್ನು ನಕ್ಸಲರಿಗೆ ತಲುಪಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!