Tuesday, April 13, 2021

ಐಎಸ್‌ಐ ವಶದಲ್ಲಿದ್ದ ಇಬ್ಬರು ಭಾರತೀಯ ಅಧಿಕಾರಿಗಳ ಬಿಡುಗಡೆ

ನವದೆಹಲಿ: ಪಾಕ್ ಗುಪ್ತಚರ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಇಬ್ಬರು ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಸೋಮವಾರ ರಾತ್ರಿ ಬಿಡುಗಡೆ ಮಾಡಲಾಗಿದೆ.
ಭಾರತದ ಇಬ್ಬರು ಅಧಿಕಾರಿಗಳು ಸೋಮವಾರ ಬೆಳಗ್ಗೆ 8 ರಿಂದಲೂ ಪಾಕಿಸ್ತಾನದ ಗುಪ್ತಚರ ಇಲಾಖೆ(ಐಎಸ್‌ಐ) ಅಧಿಕಾರಿಗಳ ವಶದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಭಾರತ ಮಿಷನ್ ನಿಂದ 2 ಕಿಲೋಮೀಟರ್ ದೂರದಲ್ಲಿರುವ ಇಸ್ಲಮಾಬಾದ್ ಕಾರ್ಯದರ್ಶಿ ಪೊಲೀಸ್ ಠಾಣೆಗೆ ಇಬ್ಬರು ಭಾರತೀಯ ಅಧಿಕಾರಿಗಳನ್ನು ಒಪ್ಪಿಸಲಾಗಿದೆ. ಇಬ್ಬರೂ ಅಧಿಕಾರಿಗಳ ಮೈಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.
ಗಡೀಪಾರು ಚರ್ಚೆ ಕಾರಣವೆ?:
ನವದೆಹಲಿಯ ಪಾಕಿಸ್ತಾನ ರಾಯಭಾರಿ ಕಚೇರಿಯ ವೀಸಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳ ವಿರುದ್ಧ ಗೂಢಚರ್ಯೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ಶಂಕಿತ ಅಧಿಕಾರಿಗಳನ್ನು ಗಡೀಪಾರು ಮಾಡುವ ಬಗ್ಗೆ ಚರ್ಚೆ ನಡೆಸಿತ್ತು. ಅದಾಗಿ ಒಂದೇ ವಾರದಲ್ಲಿ ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿರುವ ಇಬ್ಬರು ಅಧಿಕಾರಿಗಳು ನಾಪತ್ತೆಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!