newsics.com
ನವದೆಹಲಿ: ಹೊಸ ಸವಾಲು ಮತ್ತು ನಿರೀಕ್ಷೆ ಮಧ್ಯೆ ದೇಶ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ನವದೆಹಲಿಯ ಕರ್ತವ್ಯ ಪಥದಲ್ಲಿ ಮುಖ್ಯ ಸಮಾರಂಭ ನಡೆಯಲಿದೆ. ಈ ಬಾರಿ ಈಜಿಫ್ಟ್ ಅಧ್ಯಕ್ಷರು ಗಣರಾಜ್ಯೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿದ್ದಾರೆ.
ವಿವಿಧತೆಯಲ್ಲಿ ಏಕತೆಯನ್ನು ಪ್ರತಿಬಿಂಬಿಸುವ ಸ್ತಬ್ದ ಚಿತ್ರಗಳು, ಸಾಂಸ್ಕೃತಿಕ ಕಲಾ ತಂಡಗಳ ಪ್ರದರ್ಶನ ಪರೇಡ್ ನ ಮುಖ್ಯ ಆಕರ್ಷಣೆ. ಭಾರತದ ಬತ್ತಳಿಕೆಯಲ್ಲಿ ಇರುವ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮೊದಲ ಬಾರಿಗೆ ಅನಾವರಣಗೊಳ್ಳಲಿದೆ.
ಮೂರು ಸೇನಾಪಡೆಗಳ ಪರಮೋಚ್ಚ ದಂಡನಾಯಕರಾಗಿರುವ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಗೌರವ ವಂದನೆ ಸ್ವೀಕರಿಸಲಿದ್ದಾರೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಅಭೂತ ಪೂರ್ವ ಭದ್ರತಾ ವ್ಯವಸ್ಥೆ ಮಾಡಲಾಗಿದೆ