Friday, September 30, 2022

RSS ಮುಖ್ಯಸ್ಥ ಮೋಹನ್ ಭಾಗವತ್ ಅಚ್ಚರಿಯ ನಡೆ: ಮುಸ್ಲಿಂ ಮುಖಂಡರು, ಧರ್ಮಗುರುಗಳೊಂದಿಗೆ ಸಭೆ

Follow Us

newsics.com

ನವದೆಹಲಿ: ಆರ್‌ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ದೆಹಲಿಯ ಮಸೀದಿಯೊಂದರಲ್ಲಿ ಮುಸ್ಲಿಂ ಮುಖಂಡರು ಹಾಗೂ ಧರ್ಮಗುರುಗಳೊಂದಿಗೆ ಗುರುವಾರ (ಸೆ.22) ಸಭೆ ನಡೆಸಿದರು.

ಭಾಗವತ್ ಅವರು ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯ ಧರ್ಮಗುರು ಉಮರ್ ಅಹ್ಮದ್ ಇಲ್ಯಾಸಿ ಅವರ ಜತೆ ಒಂದು ಗಂಟೆಗೂ ಹೆಚ್ಚು ಕಾಲ ಗೌಪ್ಯ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಧರ್ಮಗುರುಗಳ ಮಗ ಸುಹೈಬ್ ಇಲ್ಯಾಸಿ ಈ ಬಗ್ಗೆ ಮಾತನಾಡಿ, ಇದು ದೇಶಕ್ಕೆ ಉತ್ತಮ ಸಂದೇಶ ರವಾನಿಸುತ್ತದೆ. ನಾವು ಕುಟುಂಬದಂತೆ ಚರ್ಚೆ ನಡೆಸಿದ್ದೇವೆ. ಅವರು ನಮ್ಮ ಆಹ್ವಾನದ ಮೇರೆಗೆ ಬಂದಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ. 75 ನಿಮಿಷಗಳ ಈ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೈಶಿ ಮಾತನಾಡಿ, ದೇಶದ ಪರಿಸ್ಥಿತಿಯ ಬಗ್ಗೆ ಆತಂಕವಿದೆ. ಅಸಮಾಧಾನದ ವಾತಾವರಣದಿಂದ ನನಗೆ ಸಂತೋಷವಿಲ್ಲ. ಇದು ಸಂಪೂರ್ಣವಾಗಿ ತಪ್ಪು. ಸಹಕಾರ ಮತ್ತು ಒಗ್ಗಟ್ಟಿನಿಂದ ಮಾತ್ರ ದೇಶವು ಮುನ್ನಡೆಯಲು ಸಾಧ್ಯ ಎಂಬ ಅಭಿಪ್ರಾಯವನ್ನು ಭಾಗವತ್ ವ್ಯಕ್ತಪಡಿಸಿದ್ದಾರೆ ಎಂದರು.

ಸಭೆಯಲ್ಲಿ ಮೋಹನ್ ಭಾಗವತ್ ಅವರು ಗೋಹತ್ಯೆಯಂತಹ ವಿಷಯಗಳನ್ನು ಚರ್ಚಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಹಿಜಬ್ ವಿವಾದ, ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ ಹಿನ್ನೆಲೆಯಲ್ಲಿ ಈ‌ ಸಭೆ ಮಹತ್ವ ಪಡೆದಿದೆ. ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕುವ ಅಗತ್ಯವಿಲ್ಲ ಎಂದು ಭಾಗವತ್ ಈ ಹಿಂದೆ ಹೇಳಿದ್ದರು.

ಹಿಜಾಬ್ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪಿಎಫ್ಐ ಕಚೇರಿ ಮೇಲೆ ದಾಳಿ: ಪರಿಸ್ಥಿತಿ ಪರಾಮರ್ಶೆ ನಡೆಸಿದ ಅಮಿತ್ ಶಾ

ಮೂನ್‌ಲೈಟಿಂಗ್: 300 ಉದ್ಯೋಗಿಗಳನ್ನು ವಜಾ ಮಾಡಿದ ವಿಪ್ರೋ, ಐಟಿ ಮಂದಿಗೆ ಆತಂಕ

ವಾರಕ್ಕೆ ಮೂರು ದಿನ ಕಚೇರಿಯಿಂದಲೇ ಕೆಲಸ‌ ಕಡ್ಡಾಯಗೊಳಿಸಿದ ಟಿಸಿಎಸ್

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!