ಚೆನ್ನೈ: ಅಸ್ವಸ್ಥರಾಗಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಆಸ್ಪತ್ರೆ ಸುತ್ತಮತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅವರ ಸಹೋದರಿ ಎಸ್ ಪಿ ಶೈಲಜಾ ಸೇರಿದಂತೆ ನಿಕಟ ಸಂಬಂಧಿಕರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಎಸ್ ಪಿ ಬಿ ಅವರ ಆರೋಗ್ಯ ಸ್ಥಿತಿ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ.