ಕಲಬುರಗಿ: ಕನ್ನಡ ನಾಡಿನ ಸಮೃದ್ಧಿ, ನೆಲ ಜಲ ಅಸ್ಮಿತೆಯ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಮಾತೇ ಇಲ್ಲ. ಖಾಸಗಿ ಶಾಲೆಗಳಲ್ಲಿ ಕನ್ನಡ ಉಳಿಸಲು, ಬೆಳೆಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನುಡಿದಿದ್ದಾರೆ.
ಕಲಬುರಗಿಯ ವಿಶ್ವವಿದ್ಯಾಲಯದ ವಿಜಯ ಪ್ರಧಾನ ವೇದಿಕೆಯಲ್ಲಿ ಬುಧವಾರ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಯಡಿಯೂರಪ್ಪ, ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಆದರೆ ಇದಕ್ಕೆ ಪೋಷಕರ ಸಹಕಾರವೂ ಅಗತ್ಯ ಎಂದು ಹೇಳಿದರು.
ನಾಡಿನ ಅಸ್ಮಿತೆ ಕಾಯ್ದುಕೊಳ್ಳಲು ಸರ್ಕಾರ ಬದ್ಧ- ಸಿಎಂ
Follow Us