Saturday, November 27, 2021

ಎಟಿಎಂ ಬಳಕೆ ಶುಲ್ಕ ಹಿಂಪಡೆದ SBI

Follow Us

ಮುಂಬೈ: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜೂನ್ 30ರವರೆಗೆ ಎಟಿಎಂ ಬಳಕೆ ಮೇಲಿನ ಸೇವಾ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಿಂಪಡೆದಿದೆ.
ಇದರಿಂದ ಎಸ್.ಬಿ.ಐ. ಹಾಗೂ ಇತರ ಬ್ಯಾಂಕ್ ಎಟಿಎಂಗಳಲ್ಲಿ ಎಷ್ಟು ಬಾರಿಯಾದರೂ ವಹಿವಾಟು ನಡೆಸಬಹುದಾಗಿದೆ. ಇತರ ಬ್ಯಾಂಕ್ ಗಳೂ ಎಟಿಎಂ ಬಳಕೆಯನ್ನು ಉಚಿತಗೊಳಿಸುವ ಸಾಧ್ಯತೆಯಿದೆ.
ಈ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಿದೆ. ಈ ಮೊದಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉಳಿತಾಯ ಖಾತೆ ಹೊಂದಿರುವ ತನ್ನ ಎಟಿಎಂ ಬಳಕೆದಾರರಿಗೆ ಪ್ರತಿ ತಿಂಗಳು 8 ಉಚಿತ ವಹಿವಾಟಿಗೆ ಅವಕಾಶ ನೀಡಿದ್ದು, 5 ವಹಿವಾಟು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಲ್ಲಿ ಹಾಗೂ ಮೂರು ವಹಿವಾಟು ಇತರೆ ಬ್ಯಾಂಕ್ ನಲ್ಲಿ ನಡೆಸಬಹುದಾಗಿತ್ತು. ನಂತರದ ವಹಿವಾಟಿಗೆ ಶುಲ್ಕ ವಿಧಿಸಲಾಗುತ್ತಿತ್ತು. ಇದೇ ನಿಯಮವನ್ನು ಇತರ ಬ್ಯಾಂಕ್ ಗಳೂ ಅನುಸರಿಸುತ್ತಿದ್ದವು. ಇದೀಗ ಮೂರು ತಿಂಗಳ ಕಾಲ ಎಟಿಎಂ ಬಳಕೆದಾರರು ಯಾವುದೇ ಶುಲ್ಕವಿಲ್ಲದೆ ಅನಿರ್ದಿಷ್ಟ ವಹಿವಾಟು ನಡೆಸಬಹುದಾಗಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!