Monday, August 8, 2022

ಅಕ್ಟೋಬರ್ 15ರವರೆಗೆ ಶಾಲಾ-ಕಾಲೇಜು ಬಂದ್

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ಶಾಲಾ-ಕಾಲೇಜುಗಳನ್ನು ಬಂದ್​ ಮಾಡಲು ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಮಾರ್ಗಸೂಚಿ ನೀಡಿತ್ತು.
ಆಗಸ್ಟ್ 29ರ ಮಾರ್ಗಸೂಚಿಯಂತೆ ಕಂಟೈನ್​ಮೆಂಟ್ ಝೋನ್ ಹೊರತುಪಡಿಸಿ 9 ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 21ರಿಂದ ಶಾಲೆಗಳನ್ನು ತೆರೆದು ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಬಹುದೆಂದು ಅನುಮತಿ ನೀಡಿತ್ತು. ಆದರೆ ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಮಾಣ ಕಡಿಮೆಯಾಗದ ಕಾರಣ ಈಗಿನ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮಕರವಲ್ಲ ಎಂದು ಅಭಿಪ್ರಾಯ ವ್ಯಕ್ತವಾದ ಹಿನ್ನಲೆಯಲ್ಲಿ ಅಕ್ಟೋಬರ್ 15ರವರೆಗೆ ‘ರಾಜ್ಯದ ಶಾಲಾ-ಕಾಲೇಜು ಶುರು ಮಾಡುವುದಕ್ಕೆ ಬ್ರೇಕ್‌ ಹಾಕಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...
- Advertisement -
error: Content is protected !!