Friday, March 5, 2021

ಜ.1ರಿಂದಲೇ ಶಾಲಾ-ಕಾಲೇಜು ಆರಂಭ- ಸಿಎಂ

newsics.com
ಬೆಂಗಳೂರು: ನಿಗದಿಯಂತೆ ರಾಜ್ಯದಲ್ಲಿ ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಯಾವುದೇ ಗೊಂದಲಕ್ಕೂ ಪೋಷಕರು ಒಳಗಾಗಬಾರದು. ಈಗಾಗಲೇ ನಿರ್ಧರಿಸಿದಂತೆ ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತಂತೆ ಸೋಮವಾರ (ಡಿ.28) ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 1ರಿಂದಲೇ ನಿಗದಿಯಂತೆ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. ಶಾಲೆ ಆರಂಭಿಸುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಶಾಲಾ ಆರಂಭದ ಬಗ್ಗೆ ಈಗಾಗಲೇ ನಿರ್ಧಾರ ಮಾಡಲಾಗಿದೆ. ಅದರಂತೆಯೇ ಜನವರಿ 1ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ. ಆದರೂ ಇನ್ನೆರಡು ದಿನಗಳಲ್ಲಿ ಮತ್ತೊಮ್ಮೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಒಂದೇ ದಿನ 20121 ಮಂದಿಗೆ ಕೊರೋನಾ ಸೋಂಕು; 279 ಬಲಿ

ಇಂದು, ನಾಳೆ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ನೀಡಿಕೆ ಅಣಕು ಅಭಿಯಾನ

ಆನ್ಲೈನ್ ಆಪ್ ಮೂಲಕ ಬಡ್ಡಿ ವ್ಯವಹಾರ: ಮೂವರ ಬಂಧನ

ಮತ್ತಷ್ಟು ಸುದ್ದಿಗಳು

Latest News

ಬೆಂಕಿಗೆ ಹಾರಿ ರಮೇಶ್ ಜಾರಕಿಹೊಳಿ ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ

newsics.com ಬೆಳಗಾವಿ: ಬೆಳಗಾವಿಯ ಗೋಕಾಕ್ ನಗರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ತೀವ್ರಗೊಂಡಿದೆ. ಮಾರುಕಟ್ಟೆ ಮುಚ್ಚಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಲಾಗಿದೆ ಇದೇ...

ಕೊಡಗಿನ ನರಹಂತಕ ಹುಲಿಯ ಗುರುತು ಪತ್ತೆ

newsics.com ಮಡಿಕೇರಿ:  ಕೊಡಗಿನಲ್ಲಿ ಭೀತಿ ಸೃಷ್ಟಿಸಿರುವ ನರ ಹಂತಕ ಹುಲಿಯ ಗುರುತು ಪತ್ತೆ ಹಚ್ಚಲಾಗಿದೆ. ಇದು ನಾಗರಹೊಳೆ ಸಮೀಪದ ಕಲ್ಲಳ ಅರಣ್ಯ ಪ್ರದೇಶದಿಂದ ತಪ್ಪಿಸಿಕೊಂಡು ಬಂದಿರುವ ಹುಲಿ ಎಂದು ಗುರುತಿಸಲಾಗಿದೆ. 2013ರಲ್ಲಿ ನಡೆದ ಹುಲಿ ಗಣತಿ...

ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರ ಮಾಹಿತಿ ನೀಡಿದರೆ ಬಹುಮಾನ

newsics.com ಬೆಂಗಳೂರು:  ರಾಜ್ಯದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರ ಕಲ್ಯಾಣದ ದೃಷ್ಟಿಯಿಂದ ಜಾರಿಗೆ ತಂದಿರುವ ಬಿಪಿಎಲ್ ಕಾರ್ಡ್ ಯೋಜನೆಯ ದುರುಪಯೋಗ ತಡೆಗಟ್ಟಲು ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದೆ. ಈ ಮೂಲಕ ಸರ್ಕಾರದ ಆದಾಯ...
- Advertisement -
error: Content is protected !!