Monday, September 27, 2021

ಸೆ.21ರಿಂದ ಶಾಲಾ-ಕಾಲೇಜು ಆರಂಭ; ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

Follow Us

newsics.com
ನವದೆಹಲಿ: ಕೊರೊನಾ ಆತಂಕದ ನಡುವೆಯೂ ಸೆ.21ರಿಂದ ಶಾಲಾ-ಕಾಲೇಜುಗಳ ಆರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಅನುಮತಿ ಮೇಲೆ ಶಾಲಾ-ಕಾಲೇಜು ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಸೆಪ್ಟೆಂಬರ್ 21ರಿಂದ ದೇಶಾದ್ಯಂತ 9 ರಿಂದ 12ನೇ ತರಗತಿ ಶಾಲಾ-ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮೂಲಕ ಸೆಪ್ಟೆಂಬರ್ 21ರಿಂದ ದೇಶಾದ್ಯಂತ 9ರಿಂದ 12ನೇ ತರಗತಿ ಶಾಲೆಗಳು ಆರಂಭವಾಗಲಿವೆ. ಆದರೆ, ಇದು ಐಚ್ಚಿಕ (optional) ವಾಗಿದ್ದು, ತರಗತಿಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಸರ್ಕಾರ ಹೇಳಿದೆ.
6 ಅಡಿ ದೈಹಿಕ ಅಂತರ ಕಡ್ಡಾಯ
ಈ ಕುರಿತಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಈ ಮಾರ್ಗಸೂಚಿಯಂತೆ ಶಿಕ್ಷಕರು, ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ 6 ಅಡಿ ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕಿದೆ. ಮಕ್ಕಳು ಕಡ್ಡಾಯವಾಗಿ ಬರುವಂತೆ ಒತ್ತಾಯ ಮಾಡುವಂತಿಲ್ಲ. ಶಾಲೆಗೆ ಬರುವ ಪ್ರತಿ ವಿದ್ಯಾರ್ಥಿಯು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು. ವಿದ್ಯಾರ್ಥಿಗಳು ಸಾಮಾಜಿಕ ಅಂತರದಲ್ಲಿ ಕುಳಿತುಕೊಳ್ಳಲು ಡೆಸ್ಕ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದೆ.
ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು. ಆಗಾಗ ತಪ್ಪದೇ ಹ್ಯಾಂಡ್ ವಾಷ್ ಮಾಡಿಕೊಳ್ಳಬೇಕು. ಸ್ವಯಂ ಆರೋಗ್ಯ ತಪಾಸಣೆಗೂ ಒಳಗಾಗುವಂತೆ ಸೂಚಿಸಿದೆ. ಅಲ್ಲದೇ ಆನ್ ಲೈನ್ ತರಗತಿಯ ಮುಂದುವರಿಕೆಯ ಬಗ್ಗೆಯೂ ಸೂಚನೆ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ, ಕಂಟೈನ್ಮೆಂಟ್ ಝೋನ್ ನಲ್ಲಿರುವ ಶಾಲೆಗಳ ಹಾಗೂ ಈ ಪ್ರದೇಶದಲ್ಲಿ ವಾಸಿಸುವ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗದಂತೆ ಸೂಚನೆ ನೀಡಿದೆ.

ಅಲೆಕ್ಸಾದಲ್ಲಿ ಕೇಳಿಬರಲಿದೆ ಅಮಿತಾಬ್ ಧ್ವನಿ!

ಹಿಂದಿ ಭಾಷೆ ವಿರುದ್ಧ ರಾಜ್ಯದಲ್ಲಿ ಧ್ವನಿ: ಪರ-ವಿರೋಧದ ಮಾತು

ಭಾರತದಲ್ಲಿ ಕೊರೋನಾ ತಡೆಗೆ ಮೋದಿ ಪ್ರೇರಣೆ- ಕೇಂಬ್ರಿಜ್ ವಿವಿ ಅಭಿಪ್ರಾಯ

ದೇಶದೆಲ್ಲೆಡೆ‌ ಕಂಗನಾ ಹವಾ; ಝಾನ್ಸಿ ರಾಣಿ ಸಪೋರ್ಟ್’ಗೆ ಬಂತು ಸೀರೆ…!

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!