Wednesday, October 5, 2022

ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸರ್ಕಾರ ಗಡಿಬಿಡಿ; ಪೋಷಕರ ಸಿಡಿಮಿಡಿ

Follow Us

♦ ಇಂದು ಅಂತಿಮ ನಿರ್ಧಾರ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಡುವೆಯೂ ಶಾಲೆ ಆರಂಭಿಸುವ ಕುರಿತಾಗಿ ಸಮಾಲೋಚನೆ ನಡೆದಿದೆ.
ಕಾಲೇಜುಗಳ ಆರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದ್ದು, ಶಾಲೆಗಳನ್ನು ಕೂಡ ಆರಂಭಿಸಲು ಸಾಧಕ-ಬಾಧಕಗಳ ಬಗ್ಗೆ ಸರಣಿ ಚರ್ಚೆ ನಡೆಸಲಾಗಿದೆ. ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಶಾಲಾಭಿವೃದ್ಧಿ ಸಮಿತಿ ಪೋಷಕರಿಂದ ಅಭಿಪ್ರಾಯ ಪಡೆದುಕೊಂಡಿದ್ದಾರೆ.
ಸರಣಿ ಚರ್ಚೆಗಳ ಮಾಹಿತಿಗಳನ್ನು ಒಳಗೊಂಡ ವರದಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಇಂದು (ನ.9) ಇಲಾಖೆ ಆಯುಕ್ತ ಅನ್ಬುಕುಮಾರ್ ನೀಡಲಿದ್ದಾರೆ. ಬಳಿಕ ಈ ವರದಿಯನ್ನು ಸಿಎಂ ಯಡಿಯೂರಪ್ಪ ಅವರಿಗೆ ನೀಡಲಿದ್ದು, ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸುವುದರೊಂದಿಗೆ ರಾಜ್ಯದಲ್ಲಿ ಮೊದಲ ಹಂತದಲ್ಲಿ 9 ಮತ್ತು 10ನೇ ತರಗತಿಗಳಿಗೆ ಶಾಲೆ ಆರಂಭಿಸಲು ಚಿಂತನೆ ನಡೆದಿದೆ.
ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಆಧರಿಸಿ ವರದಿ ಸಿದ್ಧಪಡಿಸಲಾಗಿದ್ದು, ಶಾಲೆ ಆರಂಭದ ಶಿಫಾರಸು ಮಾಡಲಿದೆ. ಆರೋಗ್ಯ ಇಲಾಖೆಯ ಸಲಹೆಗಳನ್ನು ಕೂಡ ಪರಿಗಣಿಸಿ ವರದಿ ಸಿದ್ಧಪಡಿಸಲಾಗಿದೆ. ಇದರೊಂದಿಗೆ ಶಾಲೆ ಆರಂಭಕ್ಕೆ ಮೊದಲು ಹಾಸ್ಟೆಲ್ ಆರಂಭಿಸಲು ಸಮಾಜ ಕಲ್ಯಾಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಆದರೆ, ಸರ್ಕಾರದ ಈ ನಿರ್ಧಾರದಿಂದಾಗಿ ಬಹುತೇಕ ಪೋಷಕರಿಗೆ ಆತಂಕ ಶುರುವಾಗಿದೆ. ಸಾಕಷ್ಟು ಪೋಷಕರು ಇದಕ್ಕೆ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಶಾಲೆ ಆರಂಭಿಸಿದ್ದರಿಂದ ಆಂಧ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಉಂಟಾಗಿರುವ ಅವಾಂತರಗಳಿಂದಾಗಿ ಪೋಷಕರು ಇನ್ನಷ್ಟು ಆತಂಕಕ್ಕೆ ಈಡಾಗಿದ್ದಾರೆ. ಈಗಾಗಲೇ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಶಾಲೆ ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭಿಸದಿರಲು ಖಾಸಗಿ ಶಾಲೆಗಳ ಒಕ್ಕೂಟ ನಿರ್ಧರಿಸಿದೆ. ಪೋಷಕರಿಂದ ಇಷ್ಟೆಲ್ಲಾ ಆತಂಕ ವ್ಯಕ್ತವಾಗಿದ್ದರೂ ಶಿಕ್ಷಣ ಇಲಾಖೆ ಶಾಲೆ ಆರಂಭಿಸಲು ಉತ್ಸಾಹ ತೋರುತ್ತಿರುವುದು ಪೋಷಕರಿಗೆ ಬಿಸಿತುಪ್ಪದಂತಾಗಿದೆ.

ಬಳಸಿ ಬಿಸಾಡುವ ಕಪ್’ಗಳಲ್ಲಿ ಟೀ, ಕಾಫಿ ಕುಡಿವ ಮುನ್ನ ಯೋಚಿಸಿ

ಬಿಗ್ ಬಾಸ್ಕೆಟ್ ಬಳಕೆದಾರರ ಮಾಹಿತಿ ಸೋರಿಕೆ ಆರೋಪ

ಉಗ್ರರ ವಿರುದ್ದ ಕೆಚ್ಚೆದೆಯ ಹೋರಾಟ: ದೇಶಕ್ಕಾಗಿ ಪ್ರಾಣ ಅರ್ಪಿಸಿದ ಯುವ ಸೇನಾಧಿಕಾರಿ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!