Tuesday, January 31, 2023

ಹಿರಿಯ ನಟ ಸತ್ಯಜಿತ್ ಇನ್ನಿಲ್ಲ

Follow Us

newsics.com

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್‌ನ ಹಿರಿಯ ನಟ ಸತ್ಯಜಿತ್ (72) ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಿಧನರಾದರು.

ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯಜಿತ್ ಅವರ ಆರೋಗ್ಯ ಶನಿವಾರ ಮತ್ತಷ್ಟು ಗಂಭೀರವಾಗಿತ್ತು.

ಡಯಾಲಿಸೀಸ್ ಮಾಡುವಾಗ ಹಾರ್ಟ್ ರೇಟ್ ಕಡಿಮೆಯಾಗಿತ್ತು. ಗುರುಚಾರದಿಂದ ಇಂಟರ್ನಲ್ ಬ್ಲೀಡಿಂಗ್ ಕೂಡ ಆಗುತ್ತಿತ್ತು, ಹೀಗಾಗಿ ವೆಂಟಿಲೇಟರ್ ಸಪೋರ್ಟ್ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಿಧನರಾದರು ಎಂದು ಅವರ ಪುತ್ರ ಆಕಾಶ್ ತಿಳಿಸಿದ್ದಾರೆ.

‘ಅರುಣ ರಾಗ’, ‘ಅಂತಿಮ ತೀರ್ಪು’, ‘ಶಿವ ಮೆಚ್ಚಿದ ಕಣ್ಣಪ್ಪ’, ‘ರಣರಂಗ’, ‘ನಮ್ಮೂರ ರಾಜ’, ‘ನ್ಯಾಯಕ್ಕಾಗಿ ನಾನು’, ‘ಯುದ್ಧಕಾಂಡ’, ‘ಇಂದ್ರಜಿತ್’, ‘ನಮ್ಮೂರ ಹಮ್ಮೀರ’, ‘ಪೊಲೀಸ್ ಲಾಕಪ್’, ‘ಮನೆದೇವ್ರು’, ‘ಮಂಡ್ಯದ ಗಂಡು’, ‘ಪೊಲೀಸ್ ಸ್ಟೋರಿ’, ‘ಸರ್ಕಲ್ ಇನ್ಸ್‌ಪೆಕ್ಟರ್’, ‘ಪಟೇಲ’, ‘ದುರ್ಗದ ಹುಲಿ’, ‘ಅಪ್ಪು’, ‘ಧಮ್’, ‘ಅಭಿ’, ‘ಆಪ್ತಮಿತ್ರ’, ‘ಅರಸು’, ‘ಇಂದ್ರ’, ‘ಭಾಗ್ಯದ ಬಳೇಗಾರ’, ‘ಕಲ್ಪನಾ’, ‘ಗಾಡ್ ಫಾದರ್’, ‘ಲಕ್ಕಿ’, ‘ಉಪ್ಪಿ 2’, ‘ಮಾಣಿಕ್ಯ’, ‘ರನ್ನ’, ‘ರಣವಿಕ್ರಮ’, ‘ಮೈತ್ರಿ’ ಸೇರಿದಂತೆ ಸತ್ಯಜಿತ್ 600ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದರು. ಒಂದು ಕಾಲದಲ್ಲಿ ಬಹುಬೇಡಿಕೆ ಪೋಷಕ ನಟನಾಗಿ ಸತ್ಯಜಿತ್ ಗುರುತಿಸಿಕೊಂಡಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!