Thursday, December 2, 2021

ಹಿರಿಯ ಸಾಹಿತಿ ಪಾಟೀಲ  ಪುಟ್ಟಪ್ಪ ಇನ್ನಿಲ್ಲ

Follow Us

ಹುಬ್ಬಳ್ಳಿ: ಹಿರಿಯ ಸಾಹಿತಿ, ಪತ್ರಕರ್ತ ನಾಡೋಜ ಪಾಟೀಲ ಪುಟ್ಟಪ್ಪ (101) ಸೋಮವಾರ ರಾತ್ರಿ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಅಸ್ವಸ್ಥರಾಗಿದ್ದ ಅವರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಫೆ.10 ರಿಂದ ಚಿಕಿತ್ಸೆ ನೀಡಲಾಗುತ್ತಿತ್ತು.

ನಾಡೋಜ ಪಾಟೀಲ ಪುಟ್ಟಪ್ಪ ಹುಬ್ಬಳ್ಳಿ ಮೂಲದ ಖ್ಯಾತ ಲೇಖಕರು. ‘ಪ್ರಪಂಚ’ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದರು. ಪಾಟೀಲ ಪುಟ್ಟಪ್ಪ ಜನಿಸಿದ್ದು ಹಾವೇರಿ ತಾಲೂಕಿನ ಕುರುಬಗೊಂಡದಲ್ಲಿ. ಓದಿದ್ದು ಕುರುಬಗೊಂಡ, ಬ್ಯಾಡಗಿ, ಹಾವೇರಿ, ಧಾರವಾಡ‍ದಲ್ಲಿ. ಕರ್ನಾಟಕ ಕಾಲೇಜಿನಲ್ಲಿ ಪದವಿ. ಬೆಳಗಾವಿಯಲ್ಲಿ ಕಾನೂನು ಅಧ್ಯಯನದಲ್ಲಿ ಪದವಿ, . 1949ರಲ್ಲಿ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ‍ದಲ್ಲಿ ಸ್ನಾತಕೋತ್ತರ ಪದವಿ. ಅಮೆರಿಕದಿಂದ ಮರಳಿದ ನಂತರ ನವಯುಗ ಮಾಸಪತ್ರಿಕೆಯ ಸಂಪಾದಕತ್ವ. 1954ರಲ್ಲಿ ಪ್ರಪಂಚ ಪತ್ರಿಕೆಯ ಸ್ಥಾಪನೆ. 1962ರಿಂದ 1974ರವರೆಗೆ ಎರಡು ಅವಧಿಗೆ ರಾಜ್ಯಸಭಾ ಸದಸ್ಯರಾಗಿದ್ದರು.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!