Saturday, April 17, 2021

ಬೆಂಗಳೂರಲ್ಲಿ ನಾಲ್ವರು ಸೇರಿ ಒಂದೇ ದಿನ ರಾಜ್ಯದಲ್ಲಿ 7 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ ಕೊರೋನಾ ಸೋಂಕಿಗೆ 7 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ನಾಲ್ವರು ಹಾಗೂ ಕಲಬುರಗಿಯಲ್ಲಿ ಇಬ್ಬರು ಮತ್ತು ಹಾಸನದಲ್ಲಿ ಓರ್ವ ಬಲಿಯಾಗಿದ್ದಾರೆ. ಶುಕ್ರವಾರ ಹೊಸದಾಗಿ 271 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6516ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಗುರುವಾರ 464 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 3440ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2995 ಸಕ್ರಿಯ ಪ್ರಕರಣಗಳಿದ್ದು, 19 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸದಾಗಿ ಪತ್ತೆಯಾದ 271 ಸೋಂಕಿತರ ಪೈಕಿ 92 ಮಂದಿ ಹೊರರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದು, 14 ಮಂದಿ ವಿದೇಶ ಪ್ರಯಾಣದ ಇತಿಹಾಸ ಹೊಂದಿದ್ದಾರೆ. ಬಳ್ಳಾರಿ 97, ಬೆಂಗಳೂರು 36, ಉಡುಪಿ 22, ಕಲಬುರ್ಗಿ 20, ಧಾರವಾಡ 19, ದಕ್ಷಿಣ ಕನ್ನಡ 17, ಬೀದರ್ 10, ಹಾಸನ 9, ಮೈಸೂರು 9, ತುಮಕೂರು 7, ಶಿವಮೊಗ್ಗ 6, ರಾಯಚೂರು 4, ಉತ್ತರ ಕನ್ನಡ 4, ಚಿತ್ರದುರ್ಗ 3, ರಾಮನಗರ 3, ಮಂಡ್ಯ 2, ಬೆಳಗಾವಿ, ವಿಜಯಪುರ, ಯಾದಗಿರಿಯಲ್ಲಿ ತಲಾ ಒಂದು ಕೊರೋನಾ ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ. ಬೆಂಗಳೂರು ನಗರದ 61 ವರ್ಷದ ಮಹಿಳೆ, 52 ವರ್ಷದ ಪುರುಷ, 49 ವರ್ಷದ ಮಹಿಳೆ, ಹಾಸನದ 60 ವರ್ಷದ ವ್ಯಕ್ತಿ ಹಾಗೂ ಕಲಬುರಗಿಯಲ್ಲಿ 53 ವರ್ಷದ ಮತ್ತು 46 ವರ್ಷದ ಪುರುಷರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!